ರಮ್ಯಾ 
ಸಿನಿಮಾ ಸುದ್ದಿ

12 ವರ್ಷಗಳ ಹಿಂದೆ ನಟಿಸಿದ್ದ ಖ್ಯಾತ ನಟನ ಚಿತ್ರದೊಂದಿಗೆ ಮತ್ತೆ ಸ್ಯಾಂಡಲ್‌ವುಡ್‌ಗೆ ರಮ್ಯಾ? ನಟ ಯಾರು ಗೊತ್ತ!

ಸ್ಯಾಂಡಲ್ವುಡ್ ನ ಕ್ವೀನ್ ರಮ್ಯಾ ನಾಲ್ಕು ವರ್ಷಗಳ ಬಳಿಕ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು 12 ವರ್ಷಗಳ ಹಿಂದೆ ನಟಿಸಿದ್ದ ಖ್ಯಾತ ನಟನ ಚಿತ್ರದಲ್ಲಿ ನಟಿಸುತ್ತಿದ್ದು ಆ ನಟ...

ಸ್ಯಾಂಡಲ್ವುಡ್ ನ ಕ್ವೀನ್ ರಮ್ಯಾ ನಾಲ್ಕು ವರ್ಷಗಳ ಬಳಿಕ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು 12 ವರ್ಷಗಳ ಹಿಂದೆ ನಟಿಸಿದ್ದ ಖ್ಯಾತ ನಟನ ಚಿತ್ರದಲ್ಲಿ ನಟಿಸುತ್ತಿದ್ದು ಆ ನಟ ಯಾರು ಅಂತಾ ಗೊತ್ತಾಗಿದೆ. 
ಸದ್ಯ ರಾಜಕೀಯದಲ್ಲಿ ಸಕ್ರಿಯರಾಗಿರುವ ರಮ್ಯಾ ಅವರು ಮತ್ತೆ ಚಿತ್ರದಲ್ಲಿ ನಟಿಸಲು ಮುಂದಾಗಿದ್ದಾರೆ. ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ. ದರ್ಶನ್ ಅಭಿನಯದ ಐತಿಹಾಸಿಕ ಮದಕರಿ ನಾಯಕ ಚಿತ್ರದಲ್ಲಿ ರಮ್ಯಾ ನಟಿಸುತ್ತಾರೆ ಎಂಬ ಮಾತುಗಳು ಗಾಂಧಿ ನಗರದಲ್ಲಿ ಕೇಳಿಬರುತ್ತಿದೆ. 
ದರ್ಶನ್ ಮತ್ತು ರಮ್ಯಾ 2006ರಲ್ಲಿ ತೆರೆ ಕಂಡಿದ್ದ ದತ್ತ ಚಿತ್ರದಲ್ಲಿ ಅಭಿನಯಿಸಿದ್ದರು. ಆ ನಂತರ ಈ ಇಬ್ಬರು ಒಟ್ಟಾಗಿ ಅಭಿನಯಿಸಿರಲಿಲ್ಲ. ಇದೀಗ ಐತಿಹಾಸಿಕ ಚಿತ್ರದ ಮೂಲಕ ರಮ್ಯಾ ಮತ್ತೆ ದರ್ಶನ್ ಜೊತೆ ಅಭಿನಯಿಸುತ್ತಾರೆ ಎಂದು ಹೇಳಲಾಗುತ್ತಿದೆ. ಚಿತ್ರ ಮುಂದಿನ ವರ್ಷ ಸೆಟ್ಟೇರುವ ಸಾಧ್ಯತೆ ಇದೆ. 
ಚಿತ್ರವನ್ನು ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶನ ಮಾಡುತ್ತಿದ್ದು ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ