ಬಾಲಿವುಡ್ ನಟಿ ತನುಶ್ರಿ ದತ್ತ ಲೈಂಗಿಕಿ ಕಿರುಕುಳ ಆರೋಪದ ನಂತರ ಆರಂಭವಾದ #MeToo ಅಭಿಯಾನ ಈಗ ಸ್ಯಾಂಡಲ್ ವುಡ್ ನಲ್ಲಿ ಕಿಡಿ ಹೊತ್ತಿಸಿದ್ದು, ಖ್ಯಾತ ತಮಿಳು ಗಾಯಕಿ ಚಿನ್ಮಯಿ ಶ್ರೀಪಾದ ಅವರು ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಇಬ್ಬರು ಅನಾಮಿಕ ಮಹಿಳೆಯರು ರಘು ದೀಕ್ಷಿತ್ ವಿರುದ್ಧ ಮಾಡಿದ ಆರೋಪಗಳ ಎರಡು ಪತ್ರಗಳನ್ನು ಚಿನ್ಮಯಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
"ರಘು ದೀಕ್ಷಿತ್ ಪರಭಕ್ಷಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕೆಲವು ವರ್ಷಗಳ ಹಿಂದೆ ರೆಕಾರ್ಡಿಂಗ್‌ಗಾಗಿ ಅವರ ಸ್ಟುಡಿಯೋಗೆ ಆಹ್ವಾನಿಸಲಾಗಿತ್ತು. ಅವರ ಪತ್ನಿಗೆ ಹುಷಾರಿಲ್ಲ ಎಂದಿದ್ದರು (ಮದುವೆಯಾದ ಎಲ್ಲಾ ಪುರುಷರಂತೆ). ಅವರ ಪತ್ನಿ ಒಳ್ಳೆಯರು. ಅವರು ಬಂದ ಕಾರಣ ರೆಕಾರ್ಡಿಂಗ್ ಕೆಲಸ ನಡೆಯಲಿಲ್ಲ. ಕೆಲಸಕ್ಕಾಗಿ ಬಂದಿದ್ದೇನೆ ಎಂದು ಪತ್ನಿ ಬಳಿ ನಟಿಸುವಂತೆ ತಿಳಿಸಿದರು. ಈ ಬಗ್ಗೆ ಅವರ ಜತೆ ವಾಗ್ವಾದ ನಡೆಯಿತು. ಬಳಿಕ ಅವರ ಪತ್ನಿ ಬಂದು ಚೆನ್ನಾಗಿಯೇ ಮಾತನಾಡಿಕೊಂಡು ಹೊರಟು ಹೋದರು. ರೆಕಾರ್ಡಿಂಗ್ ಮುಗಿದ ಬಳಿಕ ಚೆಕ್‌ಗೆ ಸಹಿ ಹಾಕುವ ಸಂದರ್ಭದಲ್ಲಿ ನನ್ನನ್ನು ಹತ್ತಿರಕ್ಕೆ ಬರಸೆಳೆದು ಚುಂಬಿಸುವಂತೆ ಕೇಳಿದರು. ಬಳಿಕ ಬಾಗಿಲ ಬಳಿ ನನ್ನನ್ನು ಎತ್ತಿಕೊಳ್ಳಲು ಪ್ರಯತ್ನಿಸಿದರು, ನಾನಾಗ ಕೂಗುತ್ತಾ ಕೆಳಗೆ ಓಡಿ ಹೋದೆ. ಬಹಳಷ್ಟು ಹೆಣ್ಣುಮಕ್ಕಳು ಅವರ ಕೈಯಲ್ಲಿ ಇದೇ ರೀತಿ ಅನುಭವಿಸಿರುತ್ತಾರೆ ಎಂದು ನನಗೆ ಗೊತ್ತು. ಹೇಸಿಗೆ ಆಗುತ್ತದೆ. ನನ್ನ ಹೆಸರನ್ನು ಬಹಿರಂಗಪಡಿಸಲು ಇಚ್ಚಿಸಲ್ಲ. ನಿಜವಾಗಿ ನನಗೆ ಆ ಗಟ್ಸ್ ಇಲ್ಲ, ನಾನಿನ್ನೂ ಸಂಗೀತದಲ್ಲಿ ನೆಲೆನಿಲ್ಲುತ್ತಿದ್ದೇನೆ" ಎಂದು ಅನಾಮಿಕ ಮಹಿಳೆ ಬರೆದುಕೊಂಡಿದ್ದಾರೆ.
ಮತ್ತೊಂದು ಪತ್ರದಲ್ಲಿ "ಹೊಸ ಟ್ಯೂನ್ ಬಗ್ಗೆ ಅಭಿಪ್ರಾಯ ಕೇಳಲು ರಘು ದೀಕ್ಷಿತ್ ನನ್ನನ್ನು ಮನೆಗೆ ಆಹ್ವಾನಿಸಿದ್ದರು. ಬಳಿಕ ತನ್ನ ತೊಡೆ ಮೇಲೆ ಕೂರುವಂತೆ ರಘು ದೀಕ್ಷಿತ್ ಹೇಳಿದ್ದರು. ಇದರಿಂದ ಟ್ಯೂನ್‌ಗಳನ್ನು ಹತ್ತಿರದಿಂದ ಕೇಳಲು ಸಾಧ್ಯವಾಗುತ್ತದೆ" ಎಂದಿದ್ದರಂತೆ. ಆದರೆ ಆ ಮಹಿಳೆ ಅದಕ್ಕೆ ಅಂಗೀಕರಿಸಲಿಲ್ಲ. ಬಳಿಕ ಅವರ ಗೆಳೆಯರು ಬಂದರು ಆಗ ಅವರಿಗೆ ಆಕೆ ಪತ್ರಕರ್ತೆ ಎಂದು ಪರಿಚಯ ಮಾಡಿಸಿದ್ದರು ಎಂದಿದ್ದಾರೆ ಚಿನ್ಮಯಿ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ರಘು ದೀಕ್ಷಿತ್ ಅವರು, "ನನ್ನ ವಿರುದ್ಧ ಆರೋಪಿಸಿರುವ ಅನಾಮಿಕರಿಗೆ ನನ್ನ ಪ್ರತಿಕ್ರಿಯೆ ಇಲ್ಲಿದೆ. ನನ್ನ ಕಡೆಯಿಂದ ಏನೇ ತಪ್ಪಾಗಿದ್ದರೂ ಕ್ಷಮೆ ಇರಲಿ. ನನ್ನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ನಾನು ಚಿನ್ಮಯಿ ವಿರುದ್ಧ ಆಕ್ರಮಣ ಮಾಡಲು ಹೋಗಲ್ಲ. ನಾನು ಪ್ರಾಮಾಣಿಕವಾಗಿದ್ದೇನೆ ಎಂಬರ್ಥದಲ್ಲಿ ಸುದೀರ್ಘ ಪತ್ರ ಬರೆದಿದ್ದಾರೆ.
ನನ್ನ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ನನಗೆ "ತೀವ್ರ ಅರಿವಿದೆ". ಇದೊಂದು ತಿಳಿವಳಿಕೆಯಿಲ್ಲದ ತಪ್ಪು ನಿರ್ಣಯ ಎಂದಿದ್ದಾರೆ.
ಪ್ರತಿಯೊಬ್ಬರೂ ಚಿನ್ಮಯಿ ವಿರುದ್ಧ ದಾಳಿ ನಡೆಸುತ್ತಿದ್ದಾರೆ. ದಯವಿಟ್ಟು ನಿಲ್ಲಿಸಿ. ಚಿನ್ಮಯಿ ಒಳ್ಳೆಯವರು. ಬೇರೆಯವರ ಪರ ಅವರು ಧ್ವನಿ ಎತ್ತುತ್ತಿದ್ದಾರೆ. ಈ ಹಿಂದೆ ಅವರ ಜತೆ ಮಾತನಾಡಿದಾಗ ತುಂಬಾ ಚೆನ್ನಾಗಿ ಮಾತನಾಡಿದ್ದರು. ಹೈದರಾಬಾದ್‌ನಲ್ಲಿ ಕಾನ್ಸರ್ಟ್‌ನಲ್ಲಿ ನನ್ನ ಜೊತೆ ಪಾಲ್ಗೊಂಡಿದ್ದರು. ಅವರ ಮನೆಗೆ ಊಟಕ್ಕೂ ಆಹ್ವಾನಿಸಿದ್ದರು.
ಚಿನ್ಮಯಿ ಹೇಳಿರುವ ವ್ಯಕ್ತಿಗೆ ನಾನು ಈ ಹಿಂದೆಯೇ ಅವರು ಬಯಸಿದಂತೆ ಸಾರ್ವಜನಿಕವಾಗಿ ಅಲ್ಲದೆ, ಖಾಸಗಿಯಾಗಿ ಕ್ಷಮೆ ಕೋರಿದ್ದೆ. ಮತ್ತೊಮ್ಮೆ ಕೇಳುತ್ತೇನೆ. ಆ ಘಟನೆ ಹೇಗೋ ನಡೆದು ಹೋಯಿತು. ಆದರೆ ಅವರು ವಿವರಿಸಿದಂತೆ ಅಲ್ಲ. ರೆಕಾರ್ಡಿಂಗ್ ಬಳಿಕ ಒಂದು ಹಗ್ ಕೊಟ್ಟಿದ್ದೆ. ಅದೇ ರೀತಿ ಚುಂಬಿಸಲು ಪ್ರಯತ್ನಿಸಿದೆ. ಆದರೆ ಅವರು ತಡೆದ ಕಾರಣ ಆ ರೀತಿ ಮಾಡಲಾಗಲಿಲ್ಲ. ಬಳಿಕ ನಾನು ಸ್ಟುಡಿಯೋದಿಂದ ಹೊರಟು ಹೋದೆ. ನನ್ನ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಇದಕ್ಕೆ ನಾನು ಕ್ಷಮೆ ಕೋರಿದ್ದೆ ಎಂದು ರಘು ದೀಕ್ಷಿತ್ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos