ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

#MeToo: ಶೃತಿ ಹರಿಹರನ್ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದರೆ ಮಾತ್ರ ಸಂಧಾನ ಎಂದ ಅರ್ಜುನ್ ಸರ್ಜಾ: ವರದಿ

ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಕಾರಣವಾಗಿರುವ #MeToo ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನಸಭೆ ನಡೆಯಲಿದ್ದು, ನಾಳಿನ ಸಭೆಗ ನಟ ಅರ್ಜುನ್ ಸರ್ಜಾ ಕೂಡ ಭಾಗಿಯಾಗಲಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಕಾರಣವಾಗಿರುವ #MeToo ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನಸಭೆ ನಡೆಯಲಿದ್ದು, ನಾಳಿನ ಸಭೆಗ ನಟ ಅರ್ಜುನ್ ಸರ್ಜಾ ಕೂಡ ಭಾಗಿಯಾಗಲಿದ್ದಾರೆ.
ಇನ್ನು ವರದಿಯೊಂದರ ಅನ್ವಯ ನಟ ಅರ್ಜುನ್ ಸರ್ಜಾ ಸಂಧಾನ ಸಭೆಗೆ ಭಾಗಿಯಾಗುವ ಕುರಿತು ನಿರ್ಧರಿಸಿದ್ದಾರೆಯಾದರೂ, ನಟಿ ಶೃತಿ ಹರಿಹರನ್ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ಲಿಖಿತ ರೂಪದಲ್ಲಿ ಬೇಷರತ್ ಕ್ಷಮೆ ಕೇಳಬೇಕು. ಆಗ ಮಾತ್ರ ತಾವು ಸಂಧಾನಕ್ಕೆ ಒಪ್ಪುವುದಾಗಿ ನಟ ಅರ್ಜುನ್ ಸರ್ಜಾ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲವಾದಲ್ಲಿ ತಾವು ಖಂಡಿತಾ ಕಾನೂನು ಕ್ರಮ ಜರುಗಿಸುವುದಾಗಿ ಅರ್ಜುನ್ ಸರ್ಜಾ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ನಾಳೆ ನಡೆಯಲಿರುವ ಸಭೆಗೆ ನಟ ಅಂಬರೀಷ್ ನೇತೃತ್ವ ವಹಿಸಿದ್ದು, ನಾಳಿನ ಸಭೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು, ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಹಿರಿಯ ನಟ ರಾಜೇಶ್ ಸೇರಿದಂತೆ ಹಲವು ನಿರ್ಮಾಪಕ ಮತ್ತು ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ