ಅರ್ಜುನ್ ಸಾರ್ಜಾ, ಶೃತಿ ಹರಿಹರನ್ 
ಸಿನಿಮಾ ಸುದ್ದಿ

#MeToo: ಶ್ರುತಿ ಹರಿಹರನ್ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅರ್ಜುನ್ ಸರ್ಜಾ

ನಟ ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ವಿರುದ್ಧದ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದ್ದು ಇದೀಗ ನಟ ಅರ್ಜುನ್ ಸರ್ಜಾ ಶ್ರುತಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ನಟ ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ವಿರುದ್ಧದ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದ್ದು ಇದೀಗ ನಟ ಅರ್ಜುನ್ ಸರ್ಜಾ ಶ್ರುತಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ. 

5 ಕೋಟಿ ರು. ಬೇಡಿಕೆ ಇಟ್ಟು ನಟಿ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಪ್ರಕರಣ ದಾಖಲಿಸಿದ್ದು ದ್ರುವ ಸರ್ಜಾ ಮೂಲಕ ನಟ ಮೊಕದ್ದಮೆ ದಾಖಲು ಮಾಡಿದಾರೆ.

ಶ್ರುತಿ ಆರೋಪಗಳು ಗಂಭೀರವಾಗಿದ್ದು ಅವರ ಜತೆ ಸಂಧಾನ ಸಾಧ್ಯವೇ ಇಲ್ಲ ಎಂದು ನಟ ಅರ್ಜುನ್ ಸರ್ಜಾ ಹೇಳಿದ್ದಾರೆ.ಸಧ್ಯ ಅವರು ಚೆನ್ನೈನಿಂದ ಬೆಂಗಳೂರಿನತ್ತ ಆಗಮಿಸುತ್ತಿದ್ದು ಇಂದು ಮಧ್ಯಾಹ್ನ ಅಂಬರೀಶ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಲಿದೆ.

1.5 ಕೋಟಿ ರೂ. ಬೇಡಿಕೆ!

ಈ ನಡುವೆ ಶ್ರುತಿ ಹರಿಹರನ್- ಅರ್ಜುನ್ ಸರ್ಜಾ ಪ್ರಕರಣದಲ್ಲಿ ಹೊಸ ತಿರುವೊಂದು ಕಾಣಿಸಿಕೊಂಡಿದ್ದು ಅನಾಮಧೇಯ ವ್ಯಕ್ತಿಯೊಬ್ಬ ರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಕರೆ ಮಾಡಿ ಶ್ರುತಿ ವಿರುದ್ಧ ಆರೋಪ ಮುಚ್ಚಿ ಹಾಕಲು 1.5 ಕೋಟಿ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಶ್ರುತಿ ಹರಿಹರನ್ ಆಪ್ತ  ಎಂದು ಹೇಳಿಕೊಳ್ಳುವ ವ್ಯಕ್ತಿ ಕರೆ ಮಾಡಿದ್ದಾರೆ ಎಂದು ಶಿವಾರ್ಜುನ್ ಖಾಸಗಿ ಟಿವಿ ವಾಹಿನಿಗೆ ತಿಳಿಸಿದ್ದಾರೆ.

ಆದರೆ ಇದೇ ವೇಳೆ ಶ್ರುತಿ ಈ ಬಗ್ಗೆ ಪ್ರತಿಕ್ರಯಿಸಿದ್ದು ಣಾನು ಯಾವ ದುಡ್ಡಿಗೆ ಬೇಡಿಕೆ ಇಟ್ಟಿಲ್ಲ, ನನ್ನ ಆಪ್ತರು ಯಾರಿಗೆ ಕರೆ ಮಾಡಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್