ಶೃತಿ ಹರಿಹರನ್ 
ಸಿನಿಮಾ ಸುದ್ದಿ

ನಾನು ಸಂತ್ರಸ್ತೆ, ನಾನ್ಯಾಕೆ ಕ್ಷಮೆ ಕೇಳಬೇಕು?: ನಟಿ ಶ್ರುತಿ ಹರಿಹರನ್

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ....

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ಅವರು ನಾನ್ಯಾಕೆ ಕ್ಷಮೆ ಕೇಳಬೇಕು ಎಂದು ಗುರುವಾರ ಪ್ರಶ್ನಿಸಿದ್ದಾರೆ.
ಇಂದು ಮಿ ಟೂ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹಿರಿಯ ನಟ ಅಂಬರೀಶ್ ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಯಿತು. ಸಭೆಯಲ್ಲಿ ಅರ್ಜುನ್ ಸರ್ಜಾ, ಶ್ರುತಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಆದರೆ ನಟಿ ಕ್ಷಮೆ ಕೇಳಲು ನಿರಾಕರಿಸಿದ್ದರಿಂದ ಸಂಧಾನ ಸಭೆ ವಿಫಲವಾಗಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರುತಿ ಹರಿಹರನ್ ಅವರು, ಪ್ರಕರಣದಲ್ಲಿ ನಾನು ಸಂತ್ರಸ್ತೆ. ನನಗೆ ಸಮಸ್ಯೆಯಾಗಿದೆ. ನಾನ್ಯಾಕೆ ಕ್ಷಮೆ ಕೇಳಬೇಕು? ನನ್ನ ವಿರುದ್ಧ ಈಗಾಗಲೇ ಎರಡು ಪ್ರಕರಣ ದಾಖಲಿಸಿದ್ದಾರೆ. ಚಿತ್ರರಂಗದಲ್ಲಿ ಆರೋಪ ಮಾಡುವ ಹೆಣ್ಣುಮಕ್ಕಳನ್ನೇ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತದೆ ಎಂದು ದೂರಿದರು.
ಹೆಣ್ಣು ತನಗಾದ ಸಮಸ್ಯೆಯನ್ನು ಹೇಳಿಕೊಂಡಾಗ ಆಕೆಯನ್ನು ದೋಷಿ, ಆಪರಾಧಿ ಸ್ಥಾನದಲ್ಲಿ ನಿಲ್ಲಿಸುವಂಥ ಪರಿಸ್ಥಿತಿ ನಮ್ಮ ಸಮಾಜದಲ್ಲಿ ನಿರ್ಮಾಣವಾಗಿದೆ. ಮಂಡಳಿ ಹಾಗೂ ಹಿರಿಯರಿಗೆ ಗೌರವ ನೀಡಿ ಶುಕ್ರವಾರದವರೆಗೂ ಕಾಯಲು ತೀರ್ಮಾನಿಸಿದ್ದೇನೆ. ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ಹೆಚ್ಚಿನದೇನೂ ಹೇಳಲ್ಲ. ಆದರೆ ನನಗೆ ತೊಂದರೆಯಾಗಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ಎದ್ದು ಹೋದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್