ಪುಣೆ: ಆತಿಥೇಯ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಪ್ರವಾಸಿ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮಾಡುತ್ತಿದ್ದು 5 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ವಿಂಡೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಪೊವೆಲ್ 21, ಹೆಮ್ರಾರ್ 15, ಸಾಮೂಯಲ್ಸ್ 9, ಹೆಟ್ಮರ್ 37 ಹಾಗೂ ಪೊವೆಲ್ 4 ರನ್ ಗಳಿಸಿ ಔಟಾಗಿದ್ದಾರೆ. ಇನ್ನು ಹೋಪ್ ಅಜೇಯ 40 ಹಾಗೂ ಹೊಲ್ಡರ್ ಅಜೇಯ 1 ರನ್ ಗಳಿಸಿ ಆಡುತ್ತಿದ್ದಾರೆ.
ಭಾರತ ಪರ ಜಸ್ ಪ್ರೀತ್ ಬುಮ್ರಾ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ. ಕಲೀಲ್ ಅಹಮ್ಮದ್ 1 ವಿಕೆಟ್ ಪಡೆದಿದ್ದಾರೆ.