ಹಿರಿಯ ನಟ ದೊಡ್ಡಣ್ಣ 
ಸಿನಿಮಾ ಸುದ್ದಿ

ಸ್ಯಾಂಡಲ್'ವುಡ್ ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು

ಸ್ಯಾಂಡಲ್'ವುಡ್ ಹಿರಿಯ ಹಾಸ್ಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ರಾಯಚೂರು: ಸ್ಯಾಂಡಲ್'ವುಡ್ ಹಿರಿಯ ಹಾಸ್ಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಶ್ರಾವಣ ಮಾಸದ ಕಡೆಯ ಸೋಮವಾರ ಹಿನ್ನಲೆಯಲ್ಲಿ ನಟ ದೊಡ್ಡಣ್ಣ ಅವರು ಕುಟುಂಬ ಸಮೇತ ದೇವಸಗೂರಿನಲ್ಲಿರುವ ಸೂಗೂರೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ದೇವಸ ದರ್ಶನದ ಮೇಲೆ ವೇಳೆ ಸರದಿಯಲ್ಲಿ ನಿಂತಿದ್ದ ದೊಡ್ಡಣ್ಣ ಅವರು ತೀವ್ರವಾಗಿ ಬಳಲಿದ್ದರು. 
ತೀವ್ರವಾಗಿ ಬಳಲಿದ್ದ ದೊಡ್ಡಣ್ಣ ಅವರಿಗೆ ಲೋ ಬಿಪಿಯಾಗಿ ತಾವು ಉಳಿದುಕೊಂಡಿದ್ದ ವಸತಿ ಗೃಹದ ಶೌಚಾಲಯದಲ್ಲಿ ಕುಸಿದು ಬಿದ್ದಿದ್ದಾರೆ. 
ಕೂಡಲೇ ಅವರನ್ನು ಆರ್'ಟಿಪಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!