ರಿಯಲ್ ಲೈಫ್‌ನಲ್ಲಿ ವಿಲನ್ ಆದ ಹುಚ್ಚ ವೆಂಕಟ್ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ!
ಬಿಗ್ ಬಾಸ್ ಹಾಗೂ ರಿಯಾಲಿಟಿ ಶೋಗಳಲ್ಲಿ ಹುಚ್ಚಾಟ ನಡೆಸುವ ಮೂಲಕ ಸುದ್ದಿಯಾಗಿದ್ದ ನಟ ಹುಚ್ಚ ವೆಂಕಟ್ ಇದೀಗ ರಿಯಲ್ ಲೈಫ್ ನಲ್ಲೂ ಹುಚ್ಚಾಟ ಮೆರೆದಿದ್ದಾರೆ...
ಬೆಂಗಳೂರು: ಬಿಗ್ ಬಾಸ್ ಹಾಗೂ ರಿಯಾಲಿಟಿ ಶೋಗಳಲ್ಲಿ ಹುಚ್ಚಾಟ ನಡೆಸುವ ಮೂಲಕ ಸುದ್ದಿಯಾಗಿದ್ದ ನಟ ಹುಚ್ಚ ವೆಂಕಟ್ ಇದೀಗ ರಿಯಲ್ ಲೈಫ್ ನಲ್ಲೂ ಹುಚ್ಚಾಟ ಮೆರೆದಿದ್ದಾರೆ.
ಕುಡಿದು ರಸ್ತೆ ಮಧ್ಯೆ ತೂರಾಟ ನಡೆಸಿ ಸುದ್ದಿಯಾಗಿದ್ದ ಹುಚ್ಚ ವೆಂಕಟ್ ಇದೀಗ ಉಲ್ಲಾಳದ ಅಂಗಡಿ ಬಳಿ ನಿಂತಿದ್ದ ಜನರು ಹಾಗೂ ಅಂಗಡಿಯವನ ಮೇಲೆ ಹಲ್ಲೆ ಮಾಡಿದ್ದಾರೆ.
ಉಲ್ಲಾಳದ ಬೇಕರಿ ಬಳಿ ಬಂದು ಟೀ ಕೊಡುವ ಯುವಕನ ಮುಖಕ್ಕೆ ಬಿಸಿ ಟೀ ಎರಚಿದ್ದು ಅಲ್ಲದೇ ಆತನನ್ನು ಹಿಂಬಾಲಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ತಡೆಯಲು ಬಂದ ಇಬ್ಬರು ಯುವಕರ ಮೇಲೆಯೂ ಹುಚ್ಚ ವೆಂಕಟ್ ಹಲ್ಲೆ ನಡೆಸಿದ್ದಾನೆ.
ಹಲ್ಲೆ ವಿಷಯ ತಿಳಿದ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವೆಂಕಟ್ ನನ್ನು ವಶಕ್ಕೆ ಪಡೆದುಕೊಂಡು ಬಳಿಕ ಜ್ಞಾನ ಭಾರತಿ ಪೊಲೀಸರ ವಶಕ್ಕೆ ನೀಡಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ವೆಂಕಟ್ ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.