ಮಿಲ್ಕಿ ಬ್ಯೂಟಿ, ಬಹುಭಾಷಾ ತಾರೆ ತಮನ್ನಾ ಭಾಟಿಯಾ , ಸದ್ಯದಲ್ಲೇ ಕನ್ನಡ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಅಭಿನಯಿಸುವ ಇಂಗಿತ ವ್ಯಕ್ತಪಡಿಸಿದ್ದು, ಒಳ್ಳೆಯ ಕಥೆಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅಭಿನಯದ ಜಾಗ್ವಾರ್ ಚಿತ್ರದ ಸಾಂಗ್ ವೊಂದರಲ್ಲಿ ಮೈ ಚಳಿ ಬಿಟ್ಟು ಕುಣಿದು ಸಿನಿರಸಿಕರ ಹೃದಯಕ್ಕೆ ಕನ್ನ ಹಾಕಿದ ಬಾಹುಬಲಿ ಖ್ಯಾತಿಯ ತಮನ್ನಾ ಭಾಟಿಯಾ, ತಮಿಳು, ತೆಲುಗು, ಹಾಗೂ ಹಿಂದಿಯಲ್ಲೂ ಬೇಡಿಕೆಯ ನಟಿಯಾಗಿದ್ದು, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಹಾಡೊಂದರಲ್ಲಿ ನರ್ತಿಸಿದ್ದಾರೆ.
ಪೊತೀಸ್ ಬ್ರಾಂಡ್ ರಾಯಬಾರಿಯಾಗಿ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಚಿಕ್ಕದಾಗಿ ತೆರೆ ಹಂಚಿಕೊಂಡಿದ್ದ ತಮನ್ನಾ ಭಾಟಿಯಾ , ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಿತ್ರದ ಚಿತ್ರೀಕರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹಾಗೂ ತಂಡದೊಂದಿಗಿನ ಕೆಲಸ ಉತ್ತಮವಾಗಿತ್ತು ಎಂದು ಕೊಂಡಾಡಿದ್ದಾರೆ. ಅಲ್ಲದೇ, ಸ್ಯಾಂಡಲ್ ವುಡ್ ನಲ್ಲಿ ಶೀಘ್ರದಲ್ಲಿಯೇ ಪೂರ್ಣ ಪ್ರಮಾಣದ ನಾಯಕಿಯಾಗಿ ಅಭಿನಯಿಸುತ್ತೇನೆ. ಉತ್ತಮ ಕಥೆ ಸಿಕ್ಕರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗೆ ಸಿನಿಮಾ ಮಾಡುವುದಾಗಿ ತಮನ್ನಾ ಭಾಟಿಯಾ ನಿನ್ನೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics