ಅಂಬರೀಶ್ 
ಸಿನಿಮಾ ಸುದ್ದಿ

ಇಳಿ ವಯಸ್ಸಿನಲ್ಲೂ ಯಂಗ್ ರೆಬೆಲ್: 'ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರ ಸೆ.27ಕ್ಕೆ ತೆರೆಗೆ!

ಸ್ಯಾಂಡಲ್ವುಡ್ ನ ರೆಬಲ್ ಸ್ಟಾರ್ ಅಂಬರೀಶ್ ಅಭಿನಯದ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದ ಇದೇ ಸೆಪ್ಟೆಂಬರ್ 27ಕ್ಕೆ ರಾಜ್ಯಾದ್ಯಂತ ಅದ್ಧೂರಿ ತೆರೆ ಕಾಣಲಿದೆ...

ಸ್ಯಾಂಡಲ್ವುಡ್ ನ ರೆಬಲ್ ಸ್ಟಾರ್ ಅಂಬರೀಶ್ ಅಭಿನಯದ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದ ಇದೇ ಸೆಪ್ಟೆಂಬರ್ 27ಕ್ಕೆ ರಾಜ್ಯಾದ್ಯಂತ ಅದ್ಧೂರಿ ತೆರೆ ಕಾಣಲಿದೆ. 
ಇಳಿ ವಯಸ್ಸಿನಲ್ಲೂ ರೆಬೆಲ್ ಸ್ಟಾರ್ ಅಂಬರೀಶ್ ಅವರು ಸಖತ್ ಆಗಿ ಡ್ಯಾನ್ಸ್ ಮತ್ತು ಫೈಟ್ ಮಾಡಿದ್ದಾರೆ. ಹಲವು ವರ್ಷಗಳ ಬಳಿಕ ಅಂಬರೀಶ್ ನಾಯಕನಟನಾಗಿ ಕಮ್ ಬ್ಯಾಕ್ ಮಾಡಿದ್ದಾರೆ. 
ಕಿಚ್ಚ ಸುದೀಪ್ ಕ್ರಿಯೆಷನ್ ಅಡಿಯಲ್ಲಿ ಜಾಕ್ ಮಂಜು ಚಿತ್ರವನ್ನು ನಿರ್ಮಿಸಿದ್ದು ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಕಿಚ್ಚ ಸುದೀಪ್, ಶ್ರುತಿ ಹರಿಹರನ್, ಯಂಗ್ ಸುಹಾಸಿನಿ ಅವರು ಅಭಿನಯಿಸಿದ್ದಾರೆ. 
ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯೂ ಸರ್ಟಿಫಿಕೇಟ್ ನೀಡಿದ್ದು ಈ ಹಿನ್ನೆಲೆಯಲ್ಲಿ ಚಿತ್ರ ತಂಡ ಇದೇ ಸೆಪ್ಟೆಂಬರ್ 27ಕ್ಕೆ ಚಿತ್ರವನ್ನು ಬಿಡುಗಡೆ ಮಾಡಲು ರೆಡಿಯಾಗಿದೆ.
ಸೆಪ್ಟೆಂಬರ್ 16ಕ್ಕೆ ಅದ್ಧೂರಿ ಆಡಿಯೋ ಲಾಂಚ್
ಚಿತ್ರ ಬಿಡುಗಡೆಗೂ ಮುನ್ನ ಸೆಪ್ಟೆಂಬರ್ 16ರಂದು ಅದ್ಧೂರಿಯಾಗಿ ಆಡಿಯೋ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅದರಂತೆ ಆಡಿಯೋ ಲಾಂಚ್ ಗೆ ಚಿತ್ರತಂಡ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ