'ಬ್ರೇಕ್' ನಂತರ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆ!
ಕಿರಿಕ್ ಪಾರ್ಟಿ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಜೋಡಿಯ ಬ್ರೇಕಪ್ ನಂತರ ಇದೀಗ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ...
ಕಿರಿಕ್ ಪಾರ್ಟಿ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಜೋಡಿಯ ಬ್ರೇಕಪ್ ನಂತರ ಇದೀಗ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಹೌದು, ರಕ್ಷಿತ್ ಶೆಟ್ಟಿ ಸದ್ಯ ಶ್ರೀಮನ್ನಾರಾಯಣ ಹಾಗೂ ಚಾರ್ಲಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ನಂತರ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ ನಿರ್ದೇಶಕ ಹೇಮಂತ್ ಎಂ ರಾವ್ ನಿರ್ದೇಶನದ ತೆನಾಲಿ ಚಿತ್ರದಲ್ಲಿ ರಕ್ಷಿತ್ ಅಭಿನಯಿಸಲಿದ್ದಾರೆ.
ಸದ್ಯ ರಕ್ಷಿತ್ ಶೆಟ್ಟಿ ಶ್ರೀಮನ್ನಾರಾಯಣ ಹಾಗೂ ಚಾರ್ಲಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದು ಹೇಮಂತ್ ರಾವ್ ಕವಲುದಾರಿ ಚಿತ್ರದಲ್ಲಿ ಬ್ಯುಸಿಯಾಗಿರುವುದರಿಂದ ಈ ಚಿತ್ರಗಳ ನಂತರ ತೆನಾಲಿ ಚಿತ್ರ ಸೆಟ್ಟೇರಲಿದೆ.
ತೆನಾಲಿ ಚಿತ್ರದಲ್ಲಿನ ರಕ್ಷಿತ್ ಶೆಟ್ಟಿಯ ಫಸ್ಟ್ ಲುಕ್ ಹೇಗಿರಲಿದೆ ಎಂಬುದನ್ನು ನಿರ್ದೇಶಕ ಹೇಮಂತ್ ರಾವ್ ಬಹಿರಂಗಪಡಿಸಿದ್ದಾರೆ. ಫಸ್ಟ್ ಲುಕ್ ನಲ್ಲಿ ರಕ್ಷಿತ್ ಶೂಟ್ ಮತ್ತು ಕ್ಯಾಪ್ ಧರಿಸಿ ಜೇಮ್ಸ್ ಬಾಂಡ್ ರಂತೆ ಕಾಣುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.