ಮೈಸೂರು: ಮೈಸೂರು ಹೊರವಲಯದ ಹಿನಕಲ್ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಅಪಘಾತಕ್ಕೀಡಾಗಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಎಲ್ಲರೂ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರು ವಾಟ್ಸಪ್ ಮೂಲಕ ಆಡಿಯೋ ರೆಕಾರ್ಡ್ ಮಾಡಿ ವಿನಂತಿಸಿಕೊಂಡಿದ್ದಾರೆ.
ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜು ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.