ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಕೋಲ್ಕತ್ತಾದಲ್ಲಿ 'ನಟಸಾರ್ವಭೌಮ' ಶೂಟಿಂಗ್ ಮುಕ್ತಾಯ, ಅಲ್ಲೂ ಇದ್ದಾರೆ ಅಪ್ಪು ಫ್ಯಾನ್ಸ್!

ಪವನ್ ಒಡೆಯರ್ ನಿರ್ದೇಶನದ ನಟಸಾರ್ವಭೌವ ಚಿತ್ರದ ಶೂಟಿಂಗ್ ಕೋಲ್ಕತ್ತಾದಲ್ಲಿ ಮುಕ್ತಾಯಗೊಂಡಿದೆ. ಇನ್ನು ಶೂಟಿಂಗ್ ವೇಳೆ ಹಲವು ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜಕುಮಾರ್...

ಪುನೀತ್ ರಾಜಕುಮಾರ್
Vishwanath S
Updated On : 27 Sept 2018, 12:48 pm
ಪವನ್ ಒಡೆಯರ್ ನಿರ್ದೇಶನದ ನಟಸಾರ್ವಭೌವ ಚಿತ್ರದ ಶೂಟಿಂಗ್ ಕೋಲ್ಕತ್ತಾದಲ್ಲಿ ಮುಕ್ತಾಯಗೊಂಡಿದೆ. ಇನ್ನು ಶೂಟಿಂಗ್ ವೇಳೆ ಹಲವು ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಭೇಟಿ ಮಾಡಿದರು. 
ಚಿತ್ರದ ಶೂಟಿಂಗ್ ಕುರಿತಂತೆ ಟ್ವೀಟ್ ಮಾಡಿರುವ ಪವನ್ ಒಡೆಯರ್ 'ಕೋಲ್ಕತ್ತಾ ಕಾಳಿ ಮಾತಾ ಕೀ ಜೈ, ಕೋಲ್ಕತ್ತಾದಲ್ಲಿ ನಟಸಾರ್ವಭೌಮ ಚಿತ್ರೀಕರಣ ಯಶಸ್ವಿಯಾಗಿದೆ. ಪುನೀತ್ ರಾಜಕುಮಾರ್ ಮತ್ತು ಅನುಪಮ ಆನ್ ಸ್ಕ್ರೀನ್ ಕೆಮಿಸ್ಟ್ರಿ ದೃಶ್ಯಗಳು ಅದ್ಭುತವಾಗಿ ಸೆರೆಯಾಗಿವೆ ಎಂದು ಟ್ವೀಟ್ ಮಾಡಿದ್ದಾರೆ. 
ಚಿತ್ರವನ್ನು ರಾಕಲೈನ್ ವೆಂಕಟೇಶ್ ನಿರ್ಮಿಸಿದ್ದು ಚಿತ್ರದಲ್ಲಿ ರಚಿತಾ ರಾಮ್ ಮತ್ತೋರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ. ಸದ್ಯ ಚಿತ್ರದ ಹಾಡಿನ ಚಿತ್ರೀಕರಣ ಬಾಕಿ ಇದೆ. ಚಿತ್ರಕ್ಕೆ ಡಿ ಇಮಾಮ್ ಸಂಗೀತ ಸಂಯೋಜಿಸುತ್ತಿದ್ದಾರೆ. 

Advertisement

Advertisement

ಚಿತ್ರೀಕರಣದ ವೇಳೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು ಪುನೀತ್ ರನ್ನು ಮಾತನಾಡಿಸಲು ತವಕಿಸುತ್ತಿದ್ದರು ಎಂದು ಒಡೆಯರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments