ಶ್ರದ್ಧಾ ಶ್ರೀನಾಥ್, ಸಮಂತಾ ಅಕ್ಕಿನೇನಿ 
ಸಿನಿಮಾ ಸುದ್ದಿ

ಕನ್ನಡತಿ ಶ್ರದ್ಧಾ ಶ್ರೀನಾಥ್ ವಿರುದ್ಧ ಸಮಂತಾ ಅಕ್ಕಿನೇನಿ ಅಭಿಮಾನಿಗಳು ತಿರುಗಿಬಿದ್ದಿದ್ದೇಕೆ?

ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಅವರಿಗೆ ಸದ್ಯ ಟಾಲಿವುಡ್ ನಲ್ಲಿ ಬೇಡಿಕೆ ಹೆಚ್ಚಾಗಿದೆ. ಈ ಮಧ್ಯೆ ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ಅಭಿಮಾನಿಗಳು ಶ್ರದ್ಧಾ ವಿರುದ್ಧ ತಿರುಗಿಬಿದ್ದಿದ್ದಾರೆ.

ಹೈದರಾಬಾದ್: ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಅವರಿಗೆ ಸದ್ಯ ಟಾಲಿವುಡ್ ನಲ್ಲಿ ಬೇಡಿಕೆ ಹೆಚ್ಚಾಗಿದೆ. ಈ ಮಧ್ಯೆ ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ಅಭಿಮಾನಿಗಳು ಶ್ರದ್ಧಾ ವಿರುದ್ಧ ತಿರುಗಿಬಿದ್ದಿದ್ದಾರೆ. 
ಸಮಂತಾ ಅಕ್ಕಿನೇನಿ ವಿರುದ್ಧ ನಟಿ ಶ್ರದ್ಧಾ ಶ್ರೀನಾಥ್ ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಕನ್ನಡದ ಯೂ ಟರ್ನ್ ಚಿತ್ರದ ಮೂಲಕ ಶ್ರದ್ಧಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದೇ ಚಿತ್ರವನ್ನು ತೆಲುಗಿನ ರಿಮೇಕ್ ನಲ್ಲಿ ಸಮಂತಾ ಅಭಿನಯಿಸಿದ್ದರು. 
ಸಂದರ್ಶನವೊಂದರಲ್ಲಿ ಶ್ರದ್ಧಾ ಅವರಿಗೆ ತೆಲುಗಿನ ಯೂ ಟರ್ನ್ ಚಿತ್ರದಲ್ಲಿ ಸಮಂತಾರ ಅಭಿನಯದ ಬಗ್ಗೆ ಪ್ರಶ್ನೆಯನ್ನು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ ಶ್ರದ್ಧಾ ಸಮಂತಾ ಅವರ ಅಭಿನಯವನ್ನು ನಾನು ಅರ್ಧ ಗಂಟೆಗೂ ಹೆಚ್ಚು ಕಾಲ ಚಿತ್ರಮಂದಿರದಲ್ಲಿ ಕುಳಿತು ನೋಡಲಾಗಲಿಲ್ಲ. ಕಾರಣ ನಾನು ಅಭಿನಯಿಸಿದ ಪಾತ್ರದಲ್ಲಿ ಬೇರೆಯವರನ್ನು ನನಗೆ ಊಹಿಸಿಕೊಳ್ಳಲಾಗುತ್ತಿಲ್ಲ ಎಂದಿದ್ದಾರೆ.
ಇದಕ್ಕೆ ಆಕ್ರೋಶಗೊಂಡಿರುವ ಸಮಂತಾ ಅಭಿಮಾನಿಗಳು ತೆಲುಗು ಸಿನಿಮಾದಲ್ಲಿ ಅಭಿನಯಿಸಿ ಅನುಭವವೇ ಇಲ್ಲದ ಶ್ರದ್ಧಾ ಹೇಗೆ ತನಗಿಂತ ಹಿರಿಯ ನಟಿಯ ವಿರುದ್ಧ ಹೀಗೆಲ್ಲ ಪ್ರತಿಕ್ರಿಯಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. 
ಶ್ರದ್ಧಾ ಇದೇ ಮೊದಲ ಬಾರಿಗೆ ತೆಲುಗಿನ ಜೆರ್ಸಿ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನಿಗೆ ಜೋಡಿಯಾಗಿ ಶ್ರದ್ಧಾ ಅಭಿನಯಿಸಿದ್ದು ಇದೇ ತಿಂಗಳ 19ಕ್ಕೆ ಜೆರ್ಸಿ ಚಿತ್ರ ಬಿಡುಗಡೆಯಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!