ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಾಳೆ ಅಣ್ಣಾವ್ರ ಹುಟ್ಟುಹಬ್ಬ: ರಾಜ್ಯ ಸರ್ಕಾರದಿಂದಲೇ ಆಚರಣೆ, ಒಂದು ದಿನ ಮುಂಚಿತವಾಗಿ ಶುಭ ಕೋರಿದ ಮುಖ್ಯಮಂತ್ರಿ

ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ರಾಜ್ಯ ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ  ಹುಟ್ಟುಹಬ್ಬವನ್ನು ರಾಜ್ಯ  ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಒಂದು ದಿನ ಮುಂಚಿತವಾಗಿಯೇ ರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ಆಚರಣೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಅವರು ಕೇಳಿಕೊಂಡಿದ್ದಾರೆ.

ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ.ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಆಡು ಮುಟ್ಟದ ಸೊಪ್ಪಿಲ್ಲ ಡಾ. ರಾಜ್ ಕುಮಾರ್ ಅಭಿನಯಿಸದ ಪಾತ್ರಗಳಿಲ್ಲ ಎಂಬಂತೆ ಎಲ್ಲಾ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಡಾ. ರಾಜ್ ಕುಮಾರ್ ಒಬ್ಬ ನಟನಾಗಿ ಚಿತ್ರರಂಗಕ್ಕೆ, ಮೇರು ವ್ಯಕ್ತಿತ್ವದ ಆದರ್ಶ ಜೀವನದ ಉದಾಹರಣೆಯಾಗಿ ನಾಡಿನ ಅನೇಕ ಪ್ರತಿಭಾವಂತರಿಗೆ ಮಾರ್ಗದರ್ಶನ ನೀಡಿದ್ದಾರೆ.  
ರಾಜ್ ಕುಮಾರ್ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿರಬಹುದು ಆದರೆ, ಅವರ ಪಾತ್ರಗಳ ಹಾಗೂ ಆದರ್ಶಮಯ ಜೀವನದ ಮೂಲಕ ಇಂದಿಗೂ ಕನ್ನಡ ನಾಡಿನ ಮನೆ ಮನೆಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT