ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಪ್ರೇಮ್ 25ನೇ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲನೆ

ಲವ್ಲಿ ಸ್ಟಾರ್ ಪ್ರೇಮ್ ಅವರ 25 ಚಿತ್ರ 'ಪ್ರೇಮಂ ಪೂಜ್ಯಂ' ಮೇ 2 ರಿಂದ ಚಿತ್ರೀಕರಣ ಆರಂಭಗೊಳ್ಳಲಿದೆ. ಮುಹೂರ್ತ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗವಹಿಸುತ್ತಿದ್ದಾರೆ.

ಲವ್ಲಿ ಸ್ಟಾರ್ ಪ್ರೇಮ್ ಅವರ 25 ಚಿತ್ರ 'ಪ್ರೇಮಂ ಪೂಜ್ಯಂ' ಮೇ 2 ರಿಂದ ಚಿತ್ರೀಕರಣ ಆರಂಭಗೊಳ್ಳಲಿದೆ. ಮುಹೂರ್ತ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗವಹಿಸುತ್ತಿದ್ದಾರೆ. ಕುತೂಹಲಕಾರಿ ಸಂಗತಿ ಎಂದರೆ ಈ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರು ಡಾಕ್ಟರ್ ಆಗಿದ್ದಾರೆ.

ಡಾ. ರಕ್ಷಿತ್ ಚಿತ್ರವನ್ನು ನಿರ್ಮಿಸುತ್ತಿದ್ದರೆ, ಡಾ. ರಾಘವೇಂದ್ರ ನಿರ್ದೇಶನದ ಪರೀಕ್ಷೆಗಿಳಿದಿದ್ದಾರೆ. ಮೊದಲ ಬಾರಿಗೆ ಸಿನಿಮಾ ರಂಗದತ್ತ ಬಂದಿರುವ ಇವರಿಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ರಾಘವೇಂದ್ರ ನಿರ್ದೇಶಕ ಜವಾಬ್ದಾರಿ ಮಾತ್ರವಲ್ಲದೆ, ಚಿತ್ರಕಥೆ, ಸಂಭಾಷಣೆಯನ್ನು ಬರೆಯುತ್ತಿದ್ದಾರೆ. ಅಲ್ಲದೇ ಸಂಗೀತ ಸಂಯೋಜನೆ ಕೂಡಾ ಮಾಡುತ್ತಿದ್ದಾರೆ.  ಮುಫ್ತಿ ಖ್ಯಾತಿಯ ನವೀನ್ ಕುಮಾರ್ ಛಾಯಾಗ್ರಾಹಣ ಒದಗಿಸಲಿದ್ದು, ಸದ್ಯದಲ್ಲಿಯೇ ಚಿತ್ರೀಕರಣ ಆರಂಭವಾಗಲಿದೆ.
ಚಿತ್ರ ತಂಡ ಇದೀಗ ಹಿರೋಯಿನ್ ಹಾಗೂ ಇತರ ಪಾತ್ರಗಳನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!