ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಕವಲುದಾರಿ ರಿಮೇಕ್ ಹಕ್ಕಿಗೆ ದಕ್ಷಿಣ ಮತ್ತು ಬಾಲಿವುಡ್‌ನಲ್ಲಿ ಮುಗಿಬಿದ್ದ ನಿರ್ಮಾಪಕರು!

ರಿಷಿ ಅಭಿನಯದ ಕವಲುದಾರಿ ಚಿತ್ರದ ಸ್ಯಾಂಡಲ್ವುಡ್ ನಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಮಧ್ಯೆ ಚಿತ್ರದ ರಿಮೇಕ್ ಹಕ್ಕಿಗಾಗಿ ದಕ್ಷಿಣ ಭಾರತ...

ರಿಷಿ ಅಭಿನಯದ ಕವಲುದಾರಿ ಚಿತ್ರದ ಸ್ಯಾಂಡಲ್ವುಡ್ ನಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಮಧ್ಯೆ ಚಿತ್ರದ ರಿಮೇಕ್ ಹಕ್ಕಿಗಾಗಿ ದಕ್ಷಿಣ ಭಾರತ ಮತ್ತು ಬಾಲಿವುಡ್ ನಲ್ಲಿ ನಿರ್ಮಾಪಕರು ಮುಗಿಬಿಳುತ್ತಿದ್ದಾರೆ.
ಪಿಆರ್ಕೆ ಪ್ರೊಡೆಕ್ಷನ್ ಅಡಿಯಲ್ಲಿ ಕವಲುದಾರಿ ಚಿತ್ರ ನಿರ್ಮಾಣವಾಗಿದ್ದು ಚಿತ್ರವನ್ನು ಹೇಮಂತ್ ಎಂ ರಾವ್ ನಿರ್ದೇಶಿಸಿದ್ದಾರೆ. ಚಿತ್ರ ಕ್ರೈಂ-ರೋಚಕತೆ ಹೊಂದಿರುವುದರಿಂದ ಪ್ರೇಕ್ಷಕರನ್ನು ಥಿಯೇಟರ್ ನತ್ತ ಸೆಳೆಯುತ್ತಿದೆ. 
ಸದ್ಯ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರ ನಿರ್ಮಾಪಕರು ಕವಲುದಾರಿ ಚಿತ್ರದ ರಿಮೇಕ್ ಹಕ್ಕಿಗೆ ಅಸಕ್ತಿ ತೋರುತ್ತಿದ್ದಾರೆ ಎಂದು ನಿರ್ದೇಶಕರು ಹೇಳಿದ್ದಾರೆ. ಇನ್ನು ರಿಮೇಕ್ ಹಕ್ಕು ನೀಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದರು.
ಚಿತ್ರದಲ್ಲಿ ರಿಷಿ ಟ್ರಾಫಿಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತು ನಿವೃತ್ತ ಅಧಿಕಾರಿಯಾಗಿ ಅನಂತ್ ನಾಗ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಅಧ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!