ಶಿಲ್ಪಾ ಶೆಟ್ಟಿ 
ಸಿನಿಮಾ ಸುದ್ದಿ

13 ವರ್ಷಗಳ ನಂತರ ಸಿನಿಮಾಗೆ ಶಿಲ್ಪಾ ಶೆಟ್ಟಿ ರೀ-ಎಂಟ್ರಿ: ರೊಮ್ಯಾಂಟಿಕ್ -ಹಾಸ್ಯ ಚಿತ್ರದಲ್ಲಿ ಬಳುಕುವ ಬಳ್ಳಿ!

ಮಂಗಳೂರು ಚೆಲುವೆ ಶಿಲ್ಪಾ ಶೆಟ್ಟಿ 2007ರ ನಂತರ ಚಿತ್ರರಂಗದಿಂದ ದೂರ ಉಳಿದಿದ್ದರು. ಬರೋಬ್ಬರೀ 13 ವರ್ಷದ ನಂತರ ‘ನಿಕಮ್ಮಾ’ ಸಿನಿಮಾದ ಮೂಲಕ ಮತ್ತೆ ...

ಮುಂಬಯಿ: ಮಂಗಳೂರು ಚೆಲುವೆ ಶಿಲ್ಪಾ ಶೆಟ್ಟಿ 2007ರ ನಂತರ ಚಿತ್ರರಂಗದಿಂದ ದೂರ ಉಳಿದಿದ್ದರು. ಬರೋಬ್ಬರೀ 13 ವರ್ಷದ ನಂತರ ‘ನಿಕಮ್ಮಾ’ ಸಿನಿಮಾದ ಮೂಲಕ ಮತ್ತೆ ತಮ್ಮ ಪಯಣವನ್ನು ಮುಂದುವರಿಸುತ್ತಿದ್ದಾರೆ
2009ರಲ್ಲಿ ಶಿಲ್ಪಾ ಶೆಟ್ಟಿ, ಉದ್ಯಮಿ ರಾಜ್ ಕುಂದ್ರಾ ಜೊತೆ ಮದುವೆಯಾಗಿದ್ದು, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಿತ್ರರಂಗದಿಂದ ದೂರ ಸರಿದಿದ್ದರು.
ಬೆಳ್ಳಿತೆರೆಗೆ ಕಮ್‍ಬ್ಯಾಕ್ ಮಾಡುತ್ತಿರುವ ಬಗ್ಗೆ ಮಾತನಾಡಿದ ಶಿಲ್ಪಾ ಶೆಟ್ಟಿ ಅವರು, “ನಾನು ಸಿನಿಮಾಗಾಗಿ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಈಗ ಎಲ್ಲವೂ ನನಗೆ ಹೊಸದು. ಚಿತ್ರದ ಸ್ಕ್ರಿಪ್ಟ್ ನನಗೆ ತುಂಬಾ ಇಷ್ಟವಾಯಿತು. ಇದೊಂದು ರೊಮ್ಯಾಂಟಿಕ್, ಹಾಸ್ಯದ ಸಿನಿಮಾವಾಗಿದೆ. ಸಬ್ಬೀರ್ ಖಾನ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. 
ಚಿತ್ರದ ನಿರ್ದೇಶಕರಾಗಿರುವ ಸಬ್ಬೀರ್ ಖಾನ್ ಅವರು ನನ್ನನ್ನು ವಿಭಿನ್ನ ರೀತಿಯಲ್ಲಿ ತೆರೆಯ ಮೇಲೆ ತೋರಿಸುತ್ತಾರೆಂದು ನಾನು ಭಾವಿಸುತ್ತೇನೆ. ಅದಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಹೇಳಿದ್ದಾರೆ.
ಬಾಜಿಗರ್ ಸಿನಿಮಾದ ಮೂಲಕ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಬಾಲಿವುಡ್ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲೂ ನಟಿಸಿದ್ದರು. ಅಷ್ಟೇ ಅಲ್ಲದೇ ಶಿಲ್ಪಾ ಶೆಟ್ಟಿ ಅವರು ಕನ್ನಡದಲ್ಲೂ ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ನಟ ರವಿಚಂದ್ರನ್, ಉಪೇಂದ್ರ ಅವರ ಜೊತೆ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video