ಧನಂಜಯ್ ಮತ್ತು ರಚಿತಾ ರಾಮ್ 
ಸಿನಿಮಾ ಸುದ್ದಿ

ಡಾಲಿ-ಧನಂಜಯ್ ಮುಂದಿನ ಸಿನಿಮಾಗೆ ಡಿಂಪಲ್ ಕ್ವೀನ್ ನಾಯಕಿ!

ಪ್ರಭು ಶ್ರೀನಿವಾಸ್ ನಿರ್ದೇಶನದ ಮುಂದಿನ ಸಿನಿಮಾ ಡಾಲಿಯಲ್ಲಿ ಧನಂಜಯ್ ನಾಯಕರಾಗಿ ನಟಿಸುತ್ತಿದ್ದು, ಧನಂಜಯ್ ಗೆ ನಾಯಕಿಯಾಗಿ ರಚಿತಾ ರಾಮ್ ...

ಪ್ರಭು ಶ್ರೀನಿವಾಸ್ ನಿರ್ದೇಶನದ ಮುಂದಿನ ಸಿನಿಮಾ ಡಾಲಿಯಲ್ಲಿ  ಧನಂಜಯ್ ನಾಯಕರಾಗಿ ನಟಿಸುತ್ತಿದ್ದು, ಧನಂಜಯ್ ಗೆ ನಾಯಕಿಯಾಗಿ ರಚಿತಾ ರಾಮ್ ನಾಯಕಿಯಾಗಲಿದ್ದಾರೆ.
ಟಗರು ಸಿನಿಮಾದಲ್ಲಿ ವಿಲ್ಲನ್ ಪಾತ್ರದಲ್ಲಿ ನಟಿಸಿದ್ದ ಧನಂಜಯ್ ಹಲವು ಸಿನಿಮಾ ಗಳಲ್ಲಿ ನಟಿಸಿದ್ದಾರೆ, ಈ ಸಿನಿಮಾ ಸಂಬಂಧ ಪ್ರೇಕ್ಷಕರಿಂದ ಫೀಡ್ ಬ್ಯಾಕ್ ತೆಗೆದುಕೊಳ್ಳಲಾಗಿದ್ದು, ಧನಂಜಯ್ ಗೆ ರಚಿತಾ ರಾಮ್ ನಾಯಕಿಯಾಗಿ ನಟಿಸಬೇಕೆಂದು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚಿನ ಸಂಖ್ಯೆಯ ಮಂದಿ ಒತ್ತಾಯಿಸಿದ್ದಾರೆ., 
ನಿರ್ಮಾಪಕ ಯೋಗೇಶ್ ಸಾಮಾಜಿಕ ಮಾಧ್ಯಮಗಳಲ್ಲಿ ರಚಿತಾ ರಾಮ್ ಮತ್ತು ಧನಂಜಯ್ ಫೋಟೋ ಅಪ್ ಲೋಡ್ ಮಾಡಿದ್ದರು,ಇದಕ್ಕೆ ಉತ್ತಮ ರೆಸ್ಪಾನ್ಸ್ ಬಂದಿದೆ.
ಈ ಪೋಸ್ಟ್ ವೈರಲ್ ಆಗಿದ್ದು, ಉತ್ತಮ ಫೀಡ್ ಬ್ಯಾಕ್ ಸಿಕ್ಕಿದೆ, ಹೀಗಾಗಿ ಸಿನಿಮಾ ತಂಡ ರಚಿತಾ ರಾಮ್ ಅವರನ್ನೇ ಪೈನಲ್ ಮಾಡಲು ನಿರ್ಧರಿಸಿದೆ.
ಪಾತ್ರಕ್ಕೆ ರಚಿತಾ ರಾಮ್ ಅವರು ಸೂಕ್ತವಾಗಿ ಹೊಂದಿಕೆಯಾಗಲಿದ್ದಾರೆ, ಹೀಗಾಗಿ ಅವರ ಜೊತೆ ಎರಡು ಮೂರು ಸುತ್ತಿನ ಮಾತುಕತೆ ನಡೆಸಿದ್ದು,  ಡಾಟೆಡ್ ಲೈನ್ ಮೇಲೆ ಸಹಿ ಮಾಡುವ ಮೊದಲು ಕಥೆ ಕೇಳಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿಯಲ್ಲಿ ಡಾಲಿ ಫರ್ಸ್ಟ್ ಲುಕ್ ರಿಲೀಸ್ ಆಗಿದ್ದು, ಸೆಪ್ಟಂಬರ್ ನಲ್ಲಿ  ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ಸದ್ಯ ಧನಂಜಯ್ ಸೂರಿಯ ಪಾಪ್ ಕಾರ್ನ್ ಮಂಕಿ ಟೈಗರ್, ಯುವರತ್ನ, ಪೊಗರು ಮತ್ತು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಅವುಗಳು ಪೂರ್ಣಗೊಂಡ ನಂತರ ಡಾಲಿ ಆರಂಭವಾಗಲಿದೆ. 
ರಚಿತಾ ರಾಮ್ ಕೂಡ, ಶಿವರಾಜ್ ಕುಮಾರ್ ನಾಯಕರಾಗಿರುವ ಆಯುಷ್ಮಾನ್ ಭವ, ರಮೇಶ್ ಅರವಿಂದ್ ಅವರ 100, ಪ್ರೇಮ್ ನಿರ್ದೇಶನದ ಎಕ್ ಲವ್ ಯಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!