ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಪ್ರವಾಹ ಸಂತ್ರಸ್ತರಿಗೆ ಮಿಡಿದ ಪುನೀತ್: ಸಿಎಂ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ

ಪ್ರವಾಹ ಸಂತ್ರಸ್ತರ ನೆರವಿಗಾಗಿ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್​ ರಾಜಕುಮಾರ್​ ಮನ ಮಿಡಿದಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ್ದಾರೆ.

ಬೆಂಗಳೂರು: ಪ್ರವಾಹ ಸಂತ್ರಸ್ತರ ನೆರವಿಗಾಗಿ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್​ ರಾಜಕುಮಾರ್​ ಮನ ಮಿಡಿದಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ್ದಾರೆ.

ಡಾಲರ್ಸ್​ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಚೆಕ್​ ನೀಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ​ ಅವರು, ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರಿಗೆ ನೀಡಬೇಕಾದ ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದ್ದೇನೆ. ನಾನು ಒಂದೆರಡು ಬಾರಿ ಸಾಮಾಜಿಕ ಜಾಲತಾಣ ನೇರ ಪ್ರಸಾರದಲ್ಲಿ ಸಂತ್ರಸ್ತರ ಕುರಿತು ಮಾತಾಡಿದ ನಂತರ ಸಾಕಷ್ಟು ಜನ ಪರಿಹಾರ ನೀಡಲು ಮುಂದಾಗಿದ್ದು ಸಂತಸ ತಂದಿದೆ ಎಂದರು.

ಈಗ ಆಗಿರುವ ನಷ್ಟಗಳ ಪರಿಹಾರಕ್ಕೆ ಧನ ಸಹಾಯ ಮಾಡಿದ್ದೇನೆ. ಇದರ ಜೊತೆಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿರುವೆ. ಈ ಮೂಲಕ ನಿರಾಶ್ರಿತರಿಗೆ ಮುಂದಿನ ದಿನಗಳಲ್ಲಿ ನೆರವಾಗುವುದಾಗಿ ಪುನೀತ್ ರಾಜ್​ಕುಮಾರ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!