ಗಣೇಶ್-ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಗೀತಾ ಚಿತ್ರದಲ್ಲಿ 'ಕನ್ನಡವೇ ಸತ್ಯ ಕನ್ನಡವೇ ನಿತ್ಯ' ಹಾಡಿಗೆ ಧ್ವನಿಯಾದ ಪುನೀತ್!

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.

ಇದೀಗ ಈ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ನಟ ಧ್ವನಿಗೂಡುತ್ತಿದೆ. ಹೌದು ಗೀತಾ ಚಿತ್ರಕ್ಕಾಗಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಹಾಡನ್ನು ಪುನೀತ್ ರಾಜಕುಮಾರ್ ಅವರು ಆಡಿದ್ದಾರೆ. ಈ ಹಾಡಿಗಾಗಿ ಹೊಸ ಟಚ್ ನೀಡಲಾಗಿದೆ. 

ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಹಾಡನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ಬರೆದಿದ್ದಾರೆ. ಚಿತ್ರಕ್ಕೆ ಅನೂಪ್ ರೂಬೆನ್ಸ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ದಿವಂಗತ ನಟ ಶಂಕರ್ ನಾಗ್ ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ನಿರ್ದೇಶಕ ವಿಜಯ್ ನಾಗೇಂದ್ರ ಗೀತಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಗೋಲ್ಡನ್ ಫಿಲ್ಮಂ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಣವಾಗುತ್ತಿದ್ದು ಸೈಯದ್ ಸಲಾಂ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸೆಪ್ಟೆಂಬರ್ 27ಕ್ಕೆ ಚಿತ್ರ ಬಿಡುಗಡೆಗೆ ಚಿತ್ರತಂಡ ಯೋಜಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT