'ಅಂದುಕೊಂಡಂತೆ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ
ಶ್ರೇಯಸ್ ನಿರ್ದೇಶನದ ಪ್ರಮೋದ್ ಬೊಪಣ್ಣ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಅಂದುಕೊಂಡಂತೆ' ಚಿತ್ರದ ಫಸ್ಟ್ ಲುಕ್ (ಮೊದಲ ನೋಟ) ಬಿಡುಗಡೆಯಾಗಿದೆ
ಬೆಂಗಳೂರು: ಶ್ರೇಯಸ್ ನಿರ್ದೇಶನದ ಪ್ರಮೋದ್ ಬೊಪಣ್ಣ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಅಂದುಕೊಂಡಂತೆ' ಚಿತ್ರದ ಫಸ್ಟ್ ಲುಕ್ (ಮೊದಲ ನೋಟ) ಬಿಡುಗಡೆಯಾಗಿದೆ. ಹ್ಯಾಟ್ರಿಕ್ ಹಿರೋ, ಕರುನಾಡು ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ನಿನ್ನೆ ಇದನ್ನು ಬಿಡುಗಡೆ ಮಾಡಿದ್ದಾರೆ.
ರಮೇಶ್ ಕೋಯಿರಾ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಶ್ವಿ ಭಟ್ ನಾಯಕಿ ನಟಿಯಾಗಿ ಅಭಿನಯಿಸಿದ್ದಾರೆ. ಶೀಘ್ರದಲ್ಲಿಯೇ ಆಡಿಯೋ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.
ಹೊಸಬರೇ ಸೇರಿ 'ಅಂದುಕೊಂಡಂತೆ'' ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಪ್ರಮೋದ್ ಬೊಪ್ಪಣ ಪ್ರಥಮ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಬಗ್ಗೆ ಚಿತ್ರ ತಂಡ ಬಹು ನಿರೀಕ್ಷೆಯನ್ನಿಟ್ಟುಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.