ಸೂಪರ್ ಸ್ಟಾರ್ ರಜನಿಕಾಂತ್ ಗೆ ಈ ಪಾತ್ರದಲ್ಲಿ ನಟಿಸಬೇಕೆಂಬ ಇಚ್ಛೆ: ಯಾವುದು ಅಂತ ಗೊತ್ತಾದ್ರೆ ಅಚ್ಚರಿಯಾಗುತ್ತೆ! 
ಸಿನಿಮಾ ಸುದ್ದಿ

ಸೂಪರ್ ಸ್ಟಾರ್ ರಜನಿಕಾಂತ್ ಗೆ ಈ ಪಾತ್ರದಲ್ಲಿ ನಟಿಸಬೇಕೆಂಬ ಇಚ್ಛೆ: ಯಾವುದು ಅಂತ ಗೊತ್ತಾದ್ರೆ ಅಚ್ಚರಿಯಾಗುತ್ತೆ! 

ಕಲಾವಿದರುಗಳಿಗೆ ನಿರ್ದಿಷ್ಟ ಪಾತ್ರ ಮಾಡಬೇಕೆಂಬ ಇಚ್ಚೆ ತೀವ್ರವಾಗಿರುತ್ತೆ. ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ನಿರ್ದಿಷ್ಟ ಪಾತ್ರದಲ್ಲಿ ನಟಿಸಬೇಕೆಂಬ ಇಚ್ಛೆ ಇದೆಯಂತೆ. 

ಮುಂಬೈ: ಕಲಾವಿದರುಗಳಿಗೆ ನಿರ್ದಿಷ್ಟ ಪಾತ್ರ ಮಾಡಬೇಕೆಂಬ ಇಚ್ಚೆ ತೀವ್ರವಾಗಿರುತ್ತೆ. ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ನಿರ್ದಿಷ್ಟ ಪಾತ್ರದಲ್ಲಿ ನಟಿಸಬೇಕೆಂಬ ಇಚ್ಛೆ ಇದೆಯಂತೆ. 

ಬಹುತೇಕ ಎಲ್ಲಾ ರೀತಿಯ ಪಾತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ತೃತೀಯಲಿಂಗಿ ಪಾತ್ರದಲ್ಲಿ ನಟಿಸಿಲ್ಲ. ಈ ಪಾತ್ರದಲ್ಲಿ ನಟಿಸಬೇಕೆಂಬ ಇಚ್ಛೆ ಇದೆ ಎಂದು ರಜನಿಕಾಂತ್ ಹೇಳಿದ್ದಾರೆ. 

45 ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದು 160 ಸಿನಿಮಾಗಳಲ್ಲಿ ನಟಿಸಿದ್ದೇನೆ, ಆದರೆ ಮಂಗಳಮುಖಿ ಪಾತ್ರದಲ್ಲಿ ನಟಿಸಿಲ್ಲ. ಇದನ್ನೂ ಪ್ರಯೋಗ ಮಾಡಬೇಕೆಂಬ ಆಸೆ ಇದೆ ಎಂದಿದ್ದಾರೆ. 

ತಮ್ಮ ಮುಂದಿನ ಚಿತ್ರ ದರ್ಬಾರ್ ನ ಟ್ರೈಲರ್ ಬಿಡುಗಡೇ ಕಾರ್ಯಕ್ರಮದಲ್ಲಿ ರಜನಿಕಾಂತ್ ಈ ಹೇಳಿಕೆ ನೀಡಿದ್ದಾರೆ.

ಸೂಪರ್ ಸ್ಟಾರ್ ನ ಆಸೆ ಇದಿಷ್ಟೇ ಅಲ್ಲ. ತಮ್ಮ ಮೂಲವಾಗಿರುವ ಮರಾಠಿ ಭಾಷೆಯ ಸಿನಿಮಾಗಳಲ್ಲೂ ಸಹ ನಟಿಸಬೇಕೆಂಬ ಆಸೆ ಇದೆಯಂತೆ. "ನಾನು ಮನೆಯಲ್ಲಿ ಮರಾಠಿ ಮಾತನಾಡುತ್ತೇನೆ. ಒಮ್ಮೆ ಮಾರಾಠಿ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಮರಾಠಿ ಸಿನಿಮಾದಲ್ಲಿ ಅಭಿನಯಿಸುವ ಆಸೆ ಇದೆ ಏನಾಗುತ್ತದೋ ನೋಡೋಣ, ದರ್ಬಾರ್ ಸಿನಿಮಾದ ಚಿತ್ರೀಕರಣ 90 ದಿನಗಳ ಕಾಲ ಮುಂಬೈ ನಲ್ಲಿ ನಡೆದಿದೆ. ಮುಂಬೈ ನ ಜನರನ್ನು ನಾನು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್