‘ಸರ್ಕಾರಿ ಪ್ರಾಥಮಿಕ ಶಾಲೆ’ಗೆ ಸ್ವರ್ಣ ಕಮಲ! 
ಸಿನಿಮಾ ಸುದ್ದಿ

‘ಸರ್ಕಾರಿ ಪ್ರಾಥಮಿಕ ಶಾಲೆ’ಗೆ ಸ್ವರ್ಣ ಕಮಲ! 

ಕನ್ನಡ ಚಲನಚಿತ್ರರಂಗದ ಖ್ಯಾತಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಜ್ವಲಿಸುತ್ತಿದ್ದು, ಖ್ಯಾತ ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿಯವರ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಕ್ಕೆ ಸ್ವರ್ಣಕಮಲ ಪ್ರಶಸ್ತಿ ಲಭಿಸಿದೆ

ಬೆಂಗಳೂರು/ನವದೆಹಲಿ: ಕನ್ನಡ ಚಲನಚಿತ್ರರಂಗದ ಖ್ಯಾತಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಜ್ವಲಿಸುತ್ತಿದ್ದು, ಖ್ಯಾತ ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿಯವರ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಕ್ಕೆ ಸ್ವರ್ಣಕಮಲ ಪ್ರಶಸ್ತಿ ಲಭಿಸಿದೆ.

ದೆಹಲಿಯಲ್ಲಿಂದು ನಡೆದ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ರಿಷಬ್ ಶೆಟ್ಟಿಯವರಿಗೆ ‘ಸ್ವರ್ಣ ಕಮಲ’ ನೀಡಿ ಗೌರವಿಸಿದರು

ಕಳೆದ ವರ್ಷ ಬಿಡುಗಡೆಯಾಗಿದ್ದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸೂಪರ್ ಹಿಟ್‍ ಆಗಿತ್ತು ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ಸಕಾರಾತ್ಮಕ ಸಂದೇಶ ಸಾರುವ ಚಿತ್ರಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು

ಸೂಪರ್ ಕಣೋ. . .

‘ಸ್ವರ್ಣ ಕಮಲ’ ಮುಡಿಗೇರಿಸಿದ ರಿಷಬ್ ಶೆಟ್ಟಿಯವರಿಗೆ ಸ್ಯಾಂಡಲ್‍ವುಡ್ ತಾರೆಯರ ಅಭಿನಂದನೆಯ ಮಹಾಪೂರವೇ ಹರಿದುಬಂದಿದೆ ಪ್ರೀತಿಯ ಗೆಳೆಯ ರಕ್ಷಿತ್ ಶೆಟ್ಟಿ, “ಸೂಪರ್ ಕಣೋ. . .ನಿನ್ನ ಸಾಧನೆ ಅತ್ಯಂತ ಶ್ರೇಷ್ಠವಾದದ್ದು. ಇಡೀ ಟೀಮ್‍ಗೆ ನಿನ್ನ ಬಗ್ಗೆ ಹೆಮ್ಮೆ ಇದೆ ಮಗಾ. . . ನಿನಗೆ ಇನ್ನಷ್ಟು ಪ್ರಶಸ್ತಿಗಳು ಸಿಗಲಿ" ಎಂದು ಟ್ವಿಟರ್ ಮೂಲಕ ಹಾರೈಸಿದ್ದಾರೆ

‘”ಪ್ರಶಸ್ತಿ ಸ್ವೀಕರಿಸಿರುವ ಬಗ್ಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ” ಎಂದು ಸ್ವತಃ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದು, ಫೋಟೋಗಳನ್ನು ಶೇರ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ