ರಶ್ಮಿಕಾ ಮಂದಣ್ಣಮತ್ತು ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ಬ್ರೇಕ್ ಅಪ್ ಬಗ್ಗೆ ಮೌನ ಮುರಿದ ರಕ್ಷಿತ್ ಶೆಟ್ಟಿ: ಕಿರಿಕ್ ಬೆಡಗಿ ರಶ್ಮಿಕಾ ಬಗ್ಗೆ ಹೇಳಿದ್ದೇನು ಗೊತ್ತೆ?

ತಮ್ಮ ಮಾಜಿ ಪ್ರೇಯಸಿ ಬಗ್ಗೆ ಇಷ್ಟು ದಿನ ತುಟಿ ಬಿಗಿದುಕೊಂಡಿದ್ದ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

ಬೆಂಗಳೂರು: ತಮ್ಮ ಮಾಜಿ ಪ್ರೇಯಸಿ ಬಗ್ಗೆ ಇಷ್ಟು ದಿನ ತುಟಿ ಬಿಗಿದುಕೊಂಡಿದ್ದ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿರುವ ರಕ್ಷಿತ್, ತಮಿಳು ಭಾಷೆಯ ಚಿತ್ರವನ್ನು ಪ್ರಮೋಟ್ ಮಾಡಲು ಚೆನ್ನೈಗೆ ತೆರಳಿದ್ದಾಗ ಅಲ್ಲಿನ ಪತ್ರಿಕೆಯಂದರ ಸಂದರ್ಶನದ ವೇಳೆ ರಶ್ಮಿಕಾ ಬಗ್ಗೆ ಬಾಯ್ಬಿಟ್ಟಿದ್ದಾರೆ.

ಪತ್ರಿಕೆ ಸಂದರ್ಶಕ, ರಕ್ಷಿತ್‍ಗೆ ಸಾಂತಾ ಕ್ಲಾಸ್ ಆಗಲು ಹೇಳಿದ್ದರು. ಈ ಸಂದರ್ಭದಲ್ಲಿ ಸಂದರ್ಶಕ ರಶ್ಮಿಕಾ ಅವರ ಹೆಸರು ಹೇಳಿದಾಗ, ರಕ್ಷಿತ್ ಅವರಿಗೆ ಶುಭ ಹಾರೈಸಿದರು.

ರಶ್ಮಿಕಾ ದೊಡ್ಡ ಕನಸುಗಾರ್ತಿ. ಅವರ ಹಿನ್ನೆಲೆ ನನಗೆ ಗೊತ್ತಿದೆ. ಹಾಗಾಗಿ ಆಕೆಯ ಕನಸು ಎಲ್ಲಿಂದ ಬರುತ್ತೆ ಎಂದು ಗೊತ್ತಿದೆ. ಈ ಬಾರಿ ಸಂತ ಕ್ಲಾಸ್ ಎಲ್ಲಾ ಕನಸುಗಳನ್ನು ಈಡೇರಿಸಲಿ ಎಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಬ್ರೇಕ್ ಅಪ್ ಬಳಿಕ ನಿಮ್ಮ ಜೀವನದಲ್ಲಿ ಯಾವ ಬದಲಾವಣೆಯಾಗಿದೆ ಎಂಬ ಪ್ರಶ್ನೆಗೆ, ಜೀವನದಲ್ಲಿ ಬಂದಿದ್ದಲ್ಲೆವನ್ನು ಹಾಗೆ ಸ್ವೀಕರಿಸಿ ಮುನ್ನಡೆದಿದ್ದೇನೆ.   ಜೀವನ ಎಂಬುದು ಎಲ್ಲಕ್ಕಿಂತ ದೊಡ್ಡದು. ಇದೆಲ್ಲವು ಜೀವನದಲ್ಲಿ ಬರುವ ಸಣ್ಣ ವಿಚಾರಗಳಷ್ಟೇ. ಬದುಕಲು ಇದಕ್ಕಿಂತ ದೊಡ್ಡ ಕಾರಣಗಳಿರುತ್ತವೆ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT