ಅವನೇ ಶ್ರೀಮನ್ನಾರಾಯಣ ಪೋಸ್ಟರ್ 
ಸಿನಿಮಾ ಸುದ್ದಿ

ಮೂರೇ ಮೂರು ದಿನಕ್ಕೆ 'ನಾರಾಯಣನ' ಕಲೆಕ್ಷನ್ ಎಷ್ಟು ಗೊತ್ತೆ?

ವರ್ಷದ ಕೊನೆಯಲ್ಲಿ ಬಿಡಗಡೆಯಾದ ರಕ್ಷಿತ್ ಶೆಟ್ಟಿ ಅಭಿನಯದ  ಅವನೇ ಶ್ರೀಮನ್ನಾರಾಯಣ ಸಿನಿಮಾ ಮೂರು ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ

ವರ್ಷದ ಕೊನೆಯಲ್ಲಿ ಬಿಡಗಡೆಯಾದ ರಕ್ಷಿತ್ ಶೆಟ್ಟಿ ಅಭಿನಯದ  ಅವನೇ ಶ್ರೀಮನ್ನಾರಾಯಣ ಸಿನಿಮಾ ಮೂರು ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ.

ರಾಜ್ಯದ 32 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ 'ಅವನೇ ಶ್ರೀಮನ್ನಾರಾಯಣ'  ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. 

ತುಮಕೂರು, ಮೈಸೂರು, ದಾವಣಗೆರೆ, ಬೆಳಗಾವಿ, ಮಂಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಚಿತ್ರದುರ್ಗಗಲ್ಲಿಯೂ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.  

ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಆಗಿ ಮೂರು ದಿನ ಕಳೆದಿದ್ದು, ಸಿನಿಮಾ  24 ಕೋಟಿ ರೂ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. 100 ಕೋಟಿ ರು ಕಲೆಕ್ಷನ್ ಮಾಡುವ ಗುರಿ ಹೊಂದಿರುವುದಾಗಿ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.

ಈ ಸಿನಿಮಾಗಾಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿದ್ದೇವೆ,  ಸಿನಿಮಾದಲ್ಲಿ ಉತ್ತಮ ಕಥೆಯಿದೆ. ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.  ಸದ್ಯಕ್ಕೆ ಕನ್ನಡದಲ್ಲಿ ಅವನೇ ಶ್ರೀಮನ್ನಾರಾಯಣ ರಿಲೀಸ್ ಆಗಿದ್ದು, ಜನವರಿ 3ರಂದು ತಮಿಳು ಮತ್ತು ಮಲಯಾಳಂ ನಲ್ಲಿ ಹಾಗೂ ಜನವರಿ 16 ರಂದು ಹಿಂದಿಯಲ್ಲಿ ರಿಲೀಸ್ ಆಗಲಿದೆ, ತಮಿಳು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದು, ಕಥೆ ಮತ್ತು ಪಾತ್ರದ ಬಗ್ಗೆ ಹಾಡಿ  ಹೊಗಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!