ಭರತ-ಬಾಹುಬಲಿ 
ಸಿನಿಮಾ ಸುದ್ದಿ

ಭರತ-ಬಾಹುಬಲಿಯಲ್ಲಿ ಮಂಜು ಮಾಂಡವ್ಯ ರಂಗು ರಂಗಿನ ಸಾಂಗು

ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಕಾಂಬಿನೇಷನ್​ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯಹಾಡೊಂದಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ. 

ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಕಾಂಬಿನೇಷನ್​ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯಹಾಡೊಂದಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ. 

ಈ ಹಾಡಿನಲ್ಲಿ ನಟಿ ಶ್ರುತಿ ಪ್ರಕಾಶ್ ಹೆಜ್ಜೆ ಹಾಕಿದ್ದಾರೆ. ಅವರಿಗೆ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಸಾಥ್ ನೀಡಿದ್ದಾರೆ.

ಈ ಚಿತ್ರದ ನಿರ್ದೇಶಕ, ನಿರ್ಮಾಪಕರೂ ಇವರೇ ಆಗಿರುವುದರಿಂದ ಅಷ್ಟೇ ಕಾಳಜಿಯಿಂದಲೇ ಸಿನಿಮಾ ಮಾಡಿ ಮುಗಿಸಿ ಈಗ ಹಾಡಿನ ಮೂಲಕ ಆಗಮಿಸಿದ್ದಾರೆ. 

ಈ ಗೀತೆಗೆ ಮಂಜು ಮಾಂಡವ್ಯ ಸಾಹಿತ್ಯ ಬರೆದಿರುವ ಜೊತೆಗೆ ಗಾಯಕಿ ಮೈತ್ರಿ ಅಯ್ಯರ್ ಜತೆಗೆ ಗಾಯಕನಾಗಿಯೂ ಮಂಜು ಧ್ವನಿ ನೀಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದು, ’ಕೆಜಿಎಫ್’ ಸಿನಿಮಾಕ್ಕೆ ಕಲಾ ನಿರ್ದೇಶನ ಮಾಡಿದ್ದ ಶಿವಕುಮಾರ್ ‘ಭರತ ಬಾಹುಬಲಿ’ ಚಿತ್ರದ ಗೀತೆಗೆ ಕಲರ್​ಫುಲ್ ಸೆಟ್ ನಿರ್ವಿುಸಿದ್ದಾರೆ. 

ಒಟ್ಟು ಐದು ದಿನಗಳ ಕಾಲ ಈ ಹಾಡನ್ನು ಚಿತ್ರೀಕರಿಸಲಾಗಿದ್ದು, ಪರವೀಶ್ ಕೆ ಛಾಯಾಗ್ರಹಣ ನಿಭಾಯಿಸಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ಮಂಜುಗೆ ಜೋಡಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?