ಜೇಮಸ್ ಬಾಂಡ್ ತಂಡದ ಜೊತೆ ಪುನೀತ್ 
ಸಿನಿಮಾ ಸುದ್ದಿ

ಪುನೀತ್ ರಾಜ್ ಕುಮಾರ್ ಜೇಮ್ಸ್ (ಬಾಂಡ್)?

ಕೆಲ ವರ್ಷಗಳ ಹಿಂದೆಯೇ ನಟ ಪುನೀತ್ ರಾಜ್ ಕುಮಾರ್ ಜೇಮ್ಸ್ ಬಾಂಡ್ ಪಾತ್ರ ಮಾಡುವುದಾಗಿ ತಿಳಿಸಿದ್ದರು. ಸದ್ಯ ಅಪ್ಪು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ,...

ಕೆಲ ವರ್ಷಗಳ ಹಿಂದೆಯೇ ನಟ ಪುನೀತ್ ರಾಜ್ ಕುಮಾರ್ ಜೇಮ್ಸ್ ಬಾಂಡ್ ಪಾತ್ರ ಮಾಡುವುದಾಗಿ ತಿಳಿಸಿದ್ದರು. ಸದ್ಯ ಅಪ್ಪು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ,
ಗಾಂಧಿ ನಗರದ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಪುನೀತ್ ರಾಜ್ ಕುಮಾರ್ ಅವರ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ, ಬಹದ್ದೂರ್ ಮತ್ತು ಭರ್ಜರಿ ಸಿನಿಮಾ ನಿರ್ದೇಶಕ ಚೇತನ್ ಕುಮಾರ್ ಈ ಪ್ರಾಜೆಕ್ಟ್ ಕೈಗೊಳ್ಳಲಿದ್ದಾರೆ.
ಪ್ರಾಜೆಕ್ಟ್ ಸಂಬಂಧ ಪುನೀತ್ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ, ನಿರ್ದೇಶಕ ಮತ್ತು ನಿರ್ಮಾಪಕರ ಜೊತೆಗೆ ಮತ್ತೊಂದು ಸುತ್ತಿನ ಮಾತುಕತೆ ನಂತರ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದ್ದಾರೆ, ಪುನೀತ್ ಅವರ ಜೇಮ್ಸ್ ಲೋಗೋ ಅಭಿಮಾನಿಗಳಲ್ಲಿ ಬಾರೀ ಕುತೂಹಲ ಮೂಡಿಸಿದೆ, ಈ ಮೊದಲು ಸಿಟಿ ಎಕ್ಸ್ ಪ್ರೆಸ್ ಗೆ ಸಂದರ್ಶನ ನೀಡಿದ್ದ ಸಿನಿಮಾ ಮಾಸ್ ಮನರಂಜನೆ ಎಂದು ನಿರ್ದೇಶಕರು ಹೇಳಿದ್ದರು.
ಜೇಮ್ಸ್ ಬಾಂಡ್ ಕಥೆ ಸಿದ್ದಪಡಿಸುತ್ತಿದ್ದು, ಪುನೀತ್ ಜೊತೆ ಕೆಲಸ ಮಾಡುವ ತಮ್ಮ ಕನಸಿನ ಪ್ರಾಜೆಕ್ಟ್ ಗಾಗಿ ನಿರ್ದೇಶಕರು ಹೆಚ್ಚು ಸಮಯ ವ್ಯಯಿಸುತ್ತಿದ್ದಾರ, 
ಇನ್ನೂ ಪುನೀತ್ ರಾಜ್ ಕುಮಾರ್ ನಟನೆಯ ನಟ ಸಾರ್ವಭೌಮಈ ವಾರದಲ್ಲಿ ರಿಲೀಸ್ ಆಗಲಿದೆ, ಫೆಬ್ರವರಿ 14ರಿಂದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಸಿನಿಮಾ ಶೂಟಿಂಗ್ ಆರಂಭವಾಗಲಿದ್ದು, ಇದೇ ವೇಳೆ ಜೇಮ್ಸ್ ಶೂಟಿಂಗ್ ಕೂಡ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT