ಕುರುಕ್ಷೇತ್ರ ಸಿನಿಮಾದಲ್ಲಿ ದರ್ಶನ್ 
ಸಿನಿಮಾ ಸುದ್ದಿ

ಮುನಿರತ್ನ 'ಕುರುಕ್ಷೇತ್ರ'ಕ್ಕೆ ರಾಷ್ಟ್ರಪ್ರಶಸ್ತಿ ನೀಡುವಂತೆ ಅರ್ಜಿ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50ನೇ ಸಿನಿಮಾ ಆಗಿರುವ ಮುನಿರತ್ನ ಕುರುಕ್ಷೇತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ..

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50ನೇ ಸಿನಿಮಾ ಆಗಿರುವ ಮುನಿರತ್ನ ಕುರುಕ್ಷೇತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ,  ದರ್ಶನ್ ಸೇರಿದಂತೆ ಹಲವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ  ಕುರುಕ್ಷೇತ್ರ  ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಕುರುಕ್ಷೇತ್ರ ಸಿನಿಮಾ ತಂಡ  ಸದ್ದಿಲ್ಲದೇ ರಾಷ್ಚ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದೆ.,2018ರಲ್ಲಿ ನಿರ್ಮಾಣವಾದ 2ಡಿ ಸಿನಿಮಾ ಗೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ, 3 ಗಂಟೆ 5 ನಿಮಿಷಗಳ ಸಿನಿಮಾ ಇದಾಗಿದೆ, ಬಹುದೊಡ್ಡ ಬಜೆಟ್ ಸಿನಿಮಾ ಇದಾಗಿರುವುದರಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಹವಾಗಿದೆ ಎಂದು ಚಿತ್ರತಂಡ ನಿರ್ಧರಿಸಿದೆ, ಹೀಗಾಗಿ ಚಿತ್ರತಂಡ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದೆ.
ಸದ್ಯ 3ಡಿ ವರ್ಷನ್ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ನಾಗಣ್ಣ ಸಿನಿಮಾ ನಿರ್ದೇಶನ ಮಾಡಿದ್ದಾರೆ, ಲಹರಿ ಆಡಿಯೋ ಗೆ ಆಡಿಯೋ ಹಕ್ಕು ಮಾರಾಟವಾಗಿದೆ. ಮಾರ್ಚ್ ತಿಂಗಳಲ್ಲಿ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.
ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ, ರವಿಚಂದ್ರನ್ ಕೃಷ್ಣನಾಗಿ, ಕರ್ಣನಾಗಿ ಅರ್ಜುನ್ ಸರ್ಜಾ, ಅಭಿಮನ್ಯುವಾಗಿ ನಿಖಿಲ್ ಕುಮಾರ್ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!