ಸುಮನಾ ಕಿತ್ತೂರು 
ಸಿನಿಮಾ ಸುದ್ದಿ

ಚಲನಚಿತ್ರ ವಾರ್ಷಿಕ ಪ್ರಶಸ್ತಿ: ಆಯ್ಕೆ ಸಲಹಾ ಸಮಿತಿ ರಚನೆ

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಆಯ್ಕೆಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡ ಆಯ್ಕೆ ಸಲಹಾ ಸಮಿತಿಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: 2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಆಯ್ಕೆಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡ ಆಯ್ಕೆ ಸಲಹಾ ಸಮಿತಿಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ, ಡಾ.ರಾಜ್‍ಕುಮಾರ್‌ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್‍ ಪ್ರಶಸ್ತಿ, ಡಾ.ವಿಷ್ಣು ವರ್ಧನ್‍ ಪ್ರಶಸ್ತಿಗಳನ್ನು ಆಯ್ಕೆ ಮಾಡಲು ಪತ್ರಕರ್ತೆ ಹಾಗೂ ನಿರ್ದೇಶಕಿ ಡಿ.ಸುಮನಾ ಕಿತ್ತೂರು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಸದಸ್ಯರಾಗಿ ನಿರ್ಮಾಪಕ ಯಾಕೂಬ್‍ ಖಾದರ್ ಗುಲ್ವಾಡಿ, ನಿರ್ದೇಶಕ ಲೆಸ್ಲಿ ಕರ್ವಾಲೋ, ರಂಗಭೂಮಿ ಕಲಾವಿದರಾದ ವಿ.ಲಕ್ಷ್ಮೀಪತಿ, ಚಿನ್ಮಯ್‍, ಛಾಯಾಗ್ರಾಹಕ ಬಿ.ಎಲ್‍.ಬಾಬು, ಸಂಕಲನಕಾರ ಎಸ್‍. ಶಿವಕುಮಾರಸ್ವಾಮಿ, ಹಿನ್ನೆಲೆ ಗಾಯಕಿ ಅರ್ಚನಾ ಉಡುಪ ಅವರನ್ನು ಆಯ್ಕೆ ಮಾಡಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು ಅಥವಾ ಪ್ರತಿನಿಧಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಮಧ್ಯಪ್ರದೇಶ: ಕಿರಿಯ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹೊಡೆತ; ಕೈ ಸುಟ್ಟು ದೌರ್ಜನ್ಯ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ