ಸಿನಿಮಾ ಸುದ್ದಿ

ಧ್ರುವ ಸರ್ಜಾರ 'ಪೊಗರು'ಗೆ ಬಂದ ನಟಿ ಮಯೂರಿ

Sumana Upadhyaya
ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿರುವ ಪೊಗರು ಚಿತ್ರದಲ್ಲಿ ಈಗಾಗಲೇ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ನಂದ ಕಿಶೋರ್ ನಿರ್ದೇಶನದ ಚಿತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್, ಜಗಪತಿ ಬಾಬು ಮತ್ತು ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಇದೀಗ ಚಿತ್ರತಂಡಕ್ಕೆ ಮತ್ತೊಬ್ಬ ನಾಯಕಿಯ ಆಗಮನವಾಗಿದೆ. ಮಯೂರಿ ಪೊಗರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದಷ್ಟೆ ಬಹಿರಂಗವಾಗಿದೆ. 25 ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗಿಯಾಗಲಿರುವ  ಮಯೂರಿ ತಮ್ಮ ಆಟಕ್ಕುಂಟು ಲೆಕ್ಕಕ್ಕಿಲ್ಲ, ನನ್ನ ಪ್ರಕಾರ ಮತ್ತು ರುಸ್ತುಮ್ ನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ನಂತರ ಪೊಗರು ಚಿತ್ರತಂಡ ಸೇರಲಿದ್ದಾರೆ.
SCROLL FOR NEXT