ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಿಲ್ಲದ ಕೆಜಿಎಫ್ ಹವಾ: ಹಿಂದಿ ಸ್ಕ್ರೀನ್ ಗಳ ಸಂಖ್ಯೆ 780ರಿಂದ 951ಕ್ಕೆ ಏರಿಕೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ತನ್ನ ನಾಗಾಲೋಟ ಮುಂದುವರೆಸಿದ್ದು, ಹಿಂದಿ ಭಾಷೆಯ ಸ್ಕ್ರೀನ್ ಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ತನ್ನ ನಾಗಾಲೋಟ ಮುಂದುವರೆಸಿದ್ದು, ಹಿಂದಿ ಭಾಷೆಯ ಸ್ಕ್ರೀನ್ ಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.
ಖ್ಯಾತ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯೊಂದಿಗೆ ದಾಖಲೆ ಬರೆದಿದ್ದ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ, ಗಲ್ಲ ಪೆಟ್ಟಿಗೆಯಲ್ಲಿ ತನ್ನ ಗಳಿಕೆಯನ್ನು ಮುಂದುವರಿಸಿದೆ. ಈ ವರೆಗೂ ಕೆಜಿಎಫ್ ಚಿತ್ರ ಹಿಂದಿ ಭಾಷೆಯಲ್ಲಿ ಮಾತ್ರವೇ ಸುಮಾರು 32 ಕೋಟಿ ಗೂ ಅಧಿಕ ರೂ ಗಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೆ ಬಿಡುಗಡೆಯಾಗಿ ಮೂರು ವರಗಳೇ ಕಳೆದರೂ ಕೆಜಿಎಫ್ ಚಿತ್ರದ ಸ್ಕೀನ್ ಗಳ ಸಂಖ್ಯೆ ಕಡಿಮೆಯಾಗಿಲ್ಲ. ಬದಲಿಗೆ ಬಿಡುಗಡೆಯಾಗುತ್ತಿರುವ ಹೊಸ ಚಿತ್ರಗಳಿಗೂ ಸವಾಲೆಸೆಯುವಂತೆ ತನ್ನ ಸ್ಕ್ರೀನ್ ಗಳ ಸಂಖ್ಯೆಯನ್ನು ವೃದ್ಧಿಸಿಕೊಂಡಿದೆ.  ಡಿ. 28ರ ಶುಕ್ರವಾರ 1.25 ಕೋಟಿ ರೂ., ಶನಿವಾರ 1.75 ಕೋಟಿ ರೂ., ಭಾನುವಾರ 2.25 ಕೋಟಿ ರೂ., ಸೋಮವಾರ 1.50 ಕೋಟಿ ರೂ., ಮಂಗಳವಾರ 2.25 ಕೋಟಿ ರೂ. ಬುಧವಾರ 1.30 ಕೋಟಿ ರೂ. ಹಾಗೂ ಗುರುವಾರ 1.20 ಕೋಟಿ ರೂ. ಆದಾಯಗಳಿಸಿದೆ.
ಸಿನಿಮಾ ಬಿಡುಗಡೆಯಾದ ಮೊದಲ ವಾರದಲ್ಲಿ 21.45 ಕೋಟಿ ರೂ. 2ನೇ ವಾರದಲ್ಲಿ 11.50 ಕೋಟಿ ರೂ. ಗಳಿಕೆಯೊಂದಿಗೆ ಒಟ್ಟು 39.95 ಕೋಟಿ ರೂ. ಗಳಿಸಿದೆ. ಅಲ್ಲದೇ 2ನೇ ವಾರದಲ್ಲಿ 780 ಪರದೆಗಳಲ್ಲಿ ಪ್ರದರ್ಶನವಾಗುತ್ತಿದ್ದ ಕೆಜಿಎಫ್ 3ನೇ ವಾರಕ್ಕೆ ಈ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದು ಈ ಹಿಂದೆ 780 ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿದ್ದ ಕೆಜಿಎಫ್ ಚಿತ್ರ ಇದೀಗ ಒಟ್ಟಾರೆ 951 ಪರದೆಗಳಲ್ಲಿ ಪ್ರದರ್ಶನವಾಗುತ್ತಿದೆ. 
ಹಿಂದಿ ಸಿನಿಮಾದ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಂಬೈಗೆ ಯಶ್ ತೆರಳಿದ್ದರು. ಐಟಿ ದಾಳಿ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ರದ್ದುಪಡಿಸಿ ಗುರುವಾರ ಬೆಂಗಳೂರಿಗೆ ಮರಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT