ಸಿನಿಮಾ ಸುದ್ದಿ

ನಿಖಿಲ್ ಕುಮಾರ್ ಅಭಿಯನದ 'ಸೀತಾರಾಮ ಕಲ್ಯಾಣ' ಚಿತ್ರದ ಟ್ರೈಲರ್ ಬಿಡುಗಡೆ

Nagaraja AB

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ  ಪುತ್ರ ನಿಖಿಲ್ ಕುಮಾರ್ ಹಾಗೂ ಡಿಂಪಲ್ ಕ್ವೀನ್  ರಚಿತಾರಾಮ್ ಅಭಿನಯದ ಬಹುನಿರೀಕ್ಷಿತ  ಸೀತಾರಾಮ ಕಲ್ಯಾಣ ಸಿನಿಮಾದ ಟ್ರೈಲರ್  ಇಂದು ಬಿಡುಗಡೆಯಾಗಿದೆ.

ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತ್ ಮೈದಾನದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ರೈಲರ್  ಬಿಡುಗಡೆ ಮಾಡಿದರು.
ಜೆಡಿಎಸ್ ಮುಖಂಡರು, ಶಾಸಕರು ಹಾಗೂ ಅಸಂಖ್ಯಾತ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಟ್ರೈಲರ್ ಬಿಡುಗಡೆಯಾಯಿತು.
SCROLL FOR NEXT