ಸಿನಿಮಾ ಸುದ್ದಿ

ಕನ್ನಡಕ್ಕೆ ಬಂದ್ಲು ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್

Lingaraj Badiger
ಕಣ್ಸನ್ನೆ ಮೂಲಕ ನ್ಯಾಷನಲ್ ಕ್ರಶ್ ಆಗಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅವರು ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುವುದು ಪಕ್ಕಾ ಆಗಿದ್ದು, ಬಿಎಸ್ ಸುಧೀಂದ್ರ ನಿರ್ಮಾಣದ, ರಘು ಕೋವಿ ನಿರ್ದೇಶನದ ಇನ್ನು ಹೆಸರಿಡದ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
 `ಒರು ಅಡಾರ್ ಲವ್' ಚಿತ್ರದ ಒಂದು ದೃಶ್ಯದ ಮೂಲಕವೆ ಯುವಕರ ಹಾರ್ಟ್ ಗೆ ಲಗ್ಗೆ ಇಟ್ಟಿದ್ದ ಪ್ರಿಯಾ ಈಗ ಕನ್ನಡ ಪ್ರೇಕ್ಷಕರ ಮನಕದಿಯಲು ಸಜ್ಜಾಗಿದ್ದಾರೆ.
ಈಗಾಗಲೇ ಬಾಲಿವುಡ್ ನ ಎರಡು ಸಿನಿಮಾಗಳಲ್ಲಿ ಅಭಿನಯಿಸಿರುವ ಪ್ರಿಯಾ ಈಗ ಸೌತ್ ಸಿನಿಮಾ ಕಡೆ ಮುಖ ಮಾಡಿದ್ದು, ಕನ್ನಡ ಸಿನಿಮಾದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ.
ನಿರ್ದೇಶಕ ಘು ಕೋವಿ ಅವರು ಕಳೆದ ಮೇ ತಿಂಗಳಲ್ಲಿ ತ್ರಿಸೂರ್ ನಲ್ಲಿ ಪ್ರಿಯಾ ಅವರನ್ನು ಭೇಟಿ ಮಾಡಿದ್ದು, ಅವರ ಹೆಸರಿಡದ ಚಿತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಚಿತ್ರ ಆಗಸ್ಟ್ 9ರಂದು ಸೆಟ್ಟೇರುವ ಸಾಧ್ಯತೆ ಇದೆ.
ಈ ಚಿತ್ರದಲ್ಲಿ ಪ್ರಿಯಾ ವಾರಿಯರ್ ಗೆ ಪಾರ್ವತಮ್ಮ ರಾಜ್ ಕುಮಾರ್ ಅವರ ಸಹೋದರ, ನಿರ್ಮಾಪಕ ಶ್ರೀನಿವಾಸ್ ಅವರ ಪುತ್ರ ಸೂರಜ್ ಕುಮಾರ್ ನಾಯಕನಾಗಿ ಆಯ್ಕೆಯಾಗಿದ್ದಾರೆ.
SCROLL FOR NEXT