ಪ್ರಜ್ವಲ್ ದೇವರಾಜ್ 
ಸಿನಿಮಾ ಸುದ್ದಿ

ವಿಶಿಷ್ಠವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಡೈನಾಮಿಕ್ ಪ್ರಿನ್ಸ್: ಪ್ರಜ್ವಲ್ ಕೆಲಸಕ್ಕೆ ನಟ ದರ್ಶನ್ ಮೆಚ್ಚುಗೆ!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ....

ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.
ಸರ್ಕಾರಿ ಶಾಲೆಯನ್ನು ದತ್ತು ಪಡೆಯುವ ಮೂಲಕ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರಜ್ವಲ್ ಅವರ ಈ ಕಾರ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿ, “ನಮ್ಮ ಹುಡ್ಗ ಪ್ರಜ್ಜು ಒಂದು ಕನ್ನಡ ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಸುದ್ದಿ ಕೇಳಿ ತುಂಬಾನೇ ಖುಷಿಯಾಯ್ತು. ಇಂಥ ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿ ಹೀಗೆ ಸದಾ ಮುಂಚೂಣಿಯಲ್ಲಿರಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಪ್ರಜ್ವಲ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದರು. “ಈ ಬಾರಿಯ ಹುಟ್ಟು ಹಬ್ಬದಂದು ನಾನು ಸರ್ಕಾರಿ ಶಾಲೆ ಉಳಿಸಿ ಎಂಬ ಸಂಸ್ಥೆಯ ಜೊತೆ ಕೈ ಜೋಡಿಸಿದ್ದೇನೆ. ಅಲ್ಲದೆ ಹುಟ್ಟುಹಬ್ಬಕ್ಕೆ ಕೇಕ್, ಹೂವಿನ ಹಾರ, ಗಿಫ್ಟ್ ಗೆ ಹಣ ಖರ್ಚು ಮಾಡುವ ಬದಲಾಗಿ ಹತ್ತಿರದಲ್ಲಿರುವ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ಸ್, ಜಾಮೆಟ್ರಿ ಬಾಕ್ಸ್ ನೀಡಿ” ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel