ಶ್ರೀಮುರಳಿ 
ಸಿನಿಮಾ ಸುದ್ದಿ

ಸ್ವಿಟ್ಜರ್ಲೆಂಡ್‌ನಲ್ಲಿ ರಿಲೀಸ್ ಆಗಲಿದೆ ಶ್ರೀಮುರಳಿಯ 'ಭರಾಟೆ' ಸಾಂಗ್

ಶ್ರೀಮುರಳಿ ಇದೀಗ "ಭರಾಟೆ" ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು ಚಿತ್ರದ ಎರಡು ಹಾಡುಗಳ ಚಿತ್ರೀಕರಣಕ್ಕಾಗಿ ಆ. 6ರಂದು ಅವರು ಸ್ವಿಟ್ಜರ್ಲೆಂಡ್‌ಗೆ ತೆರಳಲಿದ್ದಾರೆ.

ಶ್ರೀಮುರಳಿ ಇದೀಗ "ಭರಾಟೆ" ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು ಚಿತ್ರದ ಎರಡು ಹಾಡುಗಳ ಚಿತ್ರೀಕರಣಕ್ಕಾಗಿ ಆ. 6ರಂದು ಅವರು  ಸ್ವಿಟ್ಜರ್ಲೆಂಡ್‌ಗೆ ತೆರಳಲಿದ್ದಾರೆ.
ಆಡಿಯೊ ಬಿಡುಗಡೆಯೊಂದಿಗೆ ಸದ್ದು ಮಾಡುವುದಕ್ಕೆ ಯೋಜಿಸಿರುವ ಚಿತ್ರತಂಡ ಆ.9ರ ವರಮಹಾಲಕ್ಷ್ಮಿ ಹಬ್ಬದಂದು ಅಲ್ಲಿಂದಲೇ ಒಂದು ಹಾಡನ್ನು ಬಿಡುಗಡೆಗೊಳಿಸುವ ಮೂಲಕ ಚಿತ್ರಪ್ರೇಮಿಗಳ ನಿರೀಕ್ಷೆಗೆ ಕಿಚ್ಚು ಹಚ್ಚಲು ಸಿದ್ದವಾಗಿದೆ.
ಆಕ್ಷನ್ ಹಾಗೂ ಫ್ಯಾಮಿಲಿ ಡ್ರಾಮಾ ಆಗಿರುವ "ಭರಾಟೆ"ಚಿತ್ರಕ್ಕೆ ನಿರ್ದೇಶಕ ಚೇತನ್ ಕುಮಾರ್ ಸ್ವತಃ ಗೀತರಚನೆಗಾರರೂ ಆಗಿದ್ದಾರೆ.ಅರ್ಜುನ್ ಜನ್ಯಾ ಸಂಯೋಜಿಸಿರುವ ಈ ಚಿತ್ರದ ಸಂಗೀತವು ಐದು ಹಾಡುಗಳನ್ನು ಒಳಗೊಂಡಿದೆ ಮತ್ತು ಆಲ್ಬಮ್ ಹಕ್ಕುಗಳನ್ನು ಆನಂದ್ ಆಡಿಯೋ ಉತ್ತಮ ಬೆಲೆಗೆ ಪಡೆದುಕೊಂಡಿದೆ.
ತಂಡವು ಸೆಪ್ಟೆಂಬರ್ 27ಕ್ಕೆ ಚಿತ್ರವನ್ನು ತೆರೆಗೆ ತರಲು ಯೋಜಿಸಿದ್ದು . ಇದು ನಿರ್ಮಾಪಕ ಸುಪ್ರೀತ್ ಪಾಲಿಗೆ ಚೊಚ್ಚಲ ಚಿತ್ರವಾಗಿದೆ.ಈ ಚಿತ್ರದಲ್ಲಿ ಶ್ರೀಲೀಲಾ ಶ್ರೀಮುರಳಿ ಜತೆಗಾರ್ತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷವೆಂದರೆ  ಸಾಯಿ ಕುಮಾರ್, ರವಿಶಂಕರ್ ಮತ್ತು ಅಯ್ಯಪ್ಪ ಶರ್ಮಾ ಮೂವರು ಸಹೋದರರು ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಅವಿನಾಶ್, ಶರತ್ ಲೋಹಿತಾಶ್ವ, ರಾಜು ವಾಡೆ, ಮನಮೋಹನ್, ಉಗ್ರಂ ಮಂಜು,  ದೀಪಕ್ ಸಹ ಚಿತ್ರದ ನಟನಾವರ್ಗದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್