ನಟಿ ಸುಧಾರಾಣಿಗೆ ಪ್ರತಿಷ್ಟಿತ ಅಂತರಾಷ್ಟ್ರೀಯ ಪ್ರಶಸ್ತಿ 
ಸಿನಿಮಾ ಸುದ್ದಿ

ನಟಿ ಸುಧಾರಾಣಿಗೆ ಪ್ರತಿಷ್ಟಿತ ಅಂತರಾಷ್ಟ್ರೀಯ ಪ್ರಶಸ್ತಿ

ಕನ್ನಡದ ಖ್ಯಾತ ನಟಿ ಸುಧಾರಾಣಿಯವರಿಗೆ ಪ್ರತಿಷ್ಟಿತ ಆರ್ಯಭಟ ಅಂತರಾಷ್ಟ್ರೀಯ ಪುರಸ್ಕಾರ ದೊರಕಿದೆ.

ಬೆಂಗಳೂರು: ಕನ್ನಡದ ಖ್ಯಾತ ನಟಿ ಸುಧಾರಾಣಿಯವರಿಗೆ ಪ್ರತಿಷ್ಟಿತ ಆರ್ಯಭಟ ಅಂತರಾಷ್ಟ್ರೀಯ ಪುರಸ್ಕಾರ ದೊರಕಿದೆ.
ಚಿತ್ರರಂಗಕ್ಕೆ ನಟಿ ಸುಧಾರಾಣಿ ಸಲ್ಲಿಸಿದ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಸುಧಾರಆಣಿ ತಾವು ಪ್ರಶಸ್ತಿ ಸ್ವೀಕರಿಸಿದ ಕ್ಷಣದ ಕೆಲ ಚಿತ್ರಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
"ಅತ್ಯಂತ ಹಳೆಯ ಪಾರಂಪರಿಕ ಪ್ರಶಸ್ತಿಯಲ್ಲಿ ಒಂದಾಗಿರುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕಾಗಿ ಹೆಮ್ಮೆ ಎನಿಸಿದೆ.ಕನ್ನಡ ಚಿತ್ರರಂಗಕ್ಕೆ ನನ್ನ ಸೇವೆಗಾಗಿ ಈ ಪ್ರಶಸ್ತಿ ಲಭಿಸಿದೆ" ಸುಧಾರಾಣಿ ಬರೆದುಕೊಂಡಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ "ಆನಂದ್" ಮೂಲಕ ಚಿತ್ರ್ರಂಗ ಪ್ರವೇಶಿಸಿದ್ದ ಸುಧಾರಾಣಿ  ರಣರಂಗ, ಕೃಷ್ಣ ನೀ ಕುಣಿದಾಗ, ಪಂಚಮವೇದ, ಮೈಸೂರು ಮಲ್ಲಿಗೆ, ಮಣ್ಣಿನ ದೋಣಿ ಹೀಗೆ ಸಾಲು ಸಾಲು ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದಾರೆ. ಇವರು ಇದುವರೆಗೆ ಹಲವು ಬಾರಿ ರಾಜ್ಯ ಸರ್ಕಾರದ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಇತ್ತೀಚಿನ ದಿನಗಳಲ್ಲಿ ನಟಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು ತುರ್ತು ನಿರ್ಗಮನ, ಅಮರ್ ಹಾಗೂ ಗೀತಾ ಚಿತ್ರಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್