ವಿಜಯ್ ಸೂರ್ಯ 
ಸಿನಿಮಾ ಸುದ್ದಿ

ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರನಡೆದ ವಿಜಯ್ ಸೂರ್ಯ!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿಯ ಸಿದ್ದಾರ್ಥ್ ಪಾತ್ರಧಾರಿ ನಟ ವಿಜಯ್ ಸೂರ್ಯ ಹೊರ ಬಂದಿದ್ದಾರೆ....

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿಯ ಸಿದ್ದಾರ್ಥ್ ಪಾತ್ರಧಾರಿ ನಟ ವಿಜಯ್ ಸೂರ್ಯ ಹೊರ ಬಂದಿದ್ದಾರೆ.
ಈ ಧಾರಾವಾಹಿಗಾಗಿ ವಿಜಯ್ ಸೂರ್ಯ 5 ವರ್ಷ ಒಪ್ಪಂದ ಕೂಡ ಮಾಡಿಕೊಂಡಿದ್ದರು. ಈಗ ಅಗ್ರಿಮೆಂಟ್ ಅವಧಿ ಮುಗಿದಿರುವ ಕಾರಣ ವಿಜಯ್ ಧಾರಾವಾಹಿಯಿಂದ ಹೊರಬಂದಿದ್ದಾರೆ. ವಿಜಯ್ ಗೆ ಬ್ರೇಕ್ ಬೇಕಾಗಿರುವ ಕಾರಣ ಅವರು ಧಾರಾವಾಹಿಯಿಂದ ಹೊರ ನಡೆಯಲು ಇದೇ ಸಮಯ ಉತ್ತಮ ಎಂದು ಹೊರ ನಡೆದಿದ್ದಾರೆ.
ಅಗ್ನಿಸಾಕ್ಷಿ ಧಾರಾವಾಹಿ ಶುರುವಾಗಿ ಐದು ವರ್ಷ ಆಗಿದ್ದು, ವಿಜಯ್ ಸೂರ್ಯ ನಟಿಸಿದ ಸಿದ್ಧಾರ್ಥ್ ಪಾತ್ರ ಕೂಡ ಕೊನೆಯಾಗುತ್ತಿದೆ. ಧಾರಾವಾಹಿಯಲ್ಲಿ ಈಗಾಗಲೇ ಸಿದ್ಧಾರ್ಥ್ ಆಸ್ಟ್ರೇಲಿಯಾಗೆ ಹೊರಡಲು ಸಿದ್ಧರಾಗಿದ್ದು, ಅವರು ಅಲ್ಲಿಗೆ ಹೊರಟ ನಂತರ ಅವರ ಪಾತ್ರ ಕೊನೆಯಾಗಲಿದೆ.
ಫೆಬ್ರವರಿ ತಿಂಗಳಿನಲ್ಲಿ ವಿಜಯ್ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಅವರು ತಮ್ಮ ಕುಟುಂಬದ ಜೊತೆ ಸ್ವಲ್ಪ ಕಾಲ ಕಳೆಯಬೇಕು ಎಂದು ಧಾರಾವಾಹಿಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ವಿಜಯ್ ಈಗಾಗಲೇ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದು, ಈಗ ಅವರು ಲಕ್ನೋ ಟು ಮುಂಬೈ ಸಿನಿಮಾದ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT