ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಹುಟ್ಟುಹಬ್ಬದ ಹಾರ, ತುರಾಯಿ, ಕೇಕ್ ಹಣವನ್ನು ಅನಾಥಾಶ್ರಮಕ್ಕೆ ನೀಡಿ: ಗೋಲ್ಟನ್ ಸ್ಟಾರ್ ಗಣೇಶ್

ಸ್ಯಾಂಡಲ್ ವುಡ್ ನಟ, ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲವಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಖಂಡಿತ ಬೇಸರ ಉಂಟು ಮಾಡಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲವಂತೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಖಂಡಿತ ಬೇಸರ ಉಂಟು ಮಾಡಿದೆ.
ಪ್ರತಿ ವರ್ಷ ಜುಲೈ 2ರಂದು ಜನ್ಮದಿನದ ಸಂಭ್ರಮದಲ್ಲಿರುತ್ತಿದ್ದ ಗಣೇಶ್ ಗೆ ಈ ಸಲ ಏನಾಗಿದೆ ಅಂತೀರಾ? ಈ ಪ್ರಶ್ನೆಗೆ ಸ್ವತಃ ಗಣೇಶ್ ಅವರೇ ಟ್ವಿಟರ್ ಮೂಲಕ ಉತ್ತರ ಕೊಟ್ಟಿದ್ದಾರೆ.
ನನ್ನ ಪ್ರೀತಿಯ ಅಚ್ಚುಮೆಚ್ಚಿನ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ವಿನಂತಿ. ಕೆಲ ದಿನಗಳ ಹಿಂದಷ್ಟೆ ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ. ಅಲ್ಲದೆ ಜನ್ಮದಿನದ ಸಂದರ್ಭದಲ್ಲಿ ನಾವ್ಯಾರೂ ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ದೂರದೂರಿನಿಂದ ಬಂದು ನನಗಾಗಿ ಕಾಯಬೇಡಿ. ಹಾರ, ಕೇಕ್, ಬ್ಯಾನರ್ ಗಳಿಗಾಗಿ ಖರ್ಚು ಮಾಡದೆ, ಅದೇ ಹಣವನ್ನು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ನೀಡಿ” ಎಂದು ಮನವಿ ಮಾಡಿಕೊಂಡಿದ್ದಾರೆ.
“ಪ್ರತಿ ವರ್ಷ ಸಿದ್ಧತೆಗಳೊಂದಿಗೆ ಬಂದು ಶುಭ ಕೋರಿ ಹಾರೈಸುತ್ತಿದ್ದ ಅಭಿಮಾನಿಗಳಿಗೆ ಸದಾ ಋಣಿ. ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ವಿಶ್ವಾಸವಿದೆ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿ ಸದಾ ನನ್ನ ಮೇಲಿರಲಿ” ಎಂದು ಗಣೇಶ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!