ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಕನ್ನಡದ ಪ್ರಸಿದ್ದ ನಟನ ಹತ್ಯೆಗೆ ಸಂಚು: ಆರೋಪಿಗಳು ಸಿಸಿಬಿ ಪೊಲೀಸ್ ವಶಕ್ಕೆ

ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....

ಬೆಂಗಳೂರು: ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ,
ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ.  ಸಿಸಿಬಿ ದಾಳಿ ವೇಳೆ ಐದು ಮಂದಿ ಸ್ಥಳದಲ್ಲಿದ್ದು, ಓರ್ವ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳೆಲ್ಲ ಸ್ಲಂ ಭರತನ ಸಹಚರರು ಎಂದು ಗುರುತಿಸಲಾಗಿದೆ.
ಸ್ಲಂ ಭರತ ಪಡೆದಿದ್ದ ಸುಪಾರಿಯನ್ನ ತೀರಿಸಲು ಈ ನಾಲ್ವರು ಆರೋಪಿಗಳು ಮುಂದಾಗಿದ್ದರು.  ಈ ವಿಷಯವನ್ನು ಸ್ವತಃ ಭರತ್ ಪೊಲೀಸರ ಮುಂದೆ ಹೇಳಿದ್ದ. ಭರತ್ ಗ್ಯಾಂಗ್ ನಟನ ಚಲನವಲನಗಳ ಬಗ್ಗೆ ನಿಗಾ ವಹಿಸಿದ್ದರು, 
ಸಿಸಿಬಿ ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಹತ್ಯೆ ಮಾಡಲು ಭರತ್ ನಮಗೆ ಸುಪಾರಿ ನೀಡಿದ್ದ ಎಂದು ಆರೋಪಿಗಳು ಹೇಳಿದ್ದಾರೆ, ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ ಸ್ಲಂ ಭರತ್ ಸುಫಾರಿ ಪಡೆದಿದ್ದ ಎಂದು ಹೇಳಲಾಗಿದೆ. ಆದರೆ  ಪೊಲೀಸರು ಈ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

SCROLL FOR NEXT