ಸಿನಿಮಾ ಸುದ್ದಿ

ಮಲೇಶಿಯಾದಲ್ಲಿ 'ಸಿಂಗ' ಹಾಡಿನ ಚಿತ್ರೀಕರಣ

Lingaraj Badiger
ಚಿರಂಜೀವಿ ಸರ್ಜಾ ಹಾಗೂ ಅದಿತಿ ಪ್ರಭುದೇವ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿರುವ 'ಸಿಂಗ' ಚಿತ್ರದ ಹಾಡಿನ ಚಿತ್ರೀಕರಣ ಮಲೇಶಿಯಾದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ.
'ಸಿಂಗ' ಚಿತ್ರ ಹೆಸರಿಗೆ ತಕ್ಕಂತೆ ಇದೊಂದು ಪಕ್ಕಾ ಮಾಸ್ ಚಿತ್ರವಾಗಿದ್ದು, 'ರಾಮ್ ಲೀಲಾ'' ಖ್ಯಾತಿಯ ವಿಜಯ್ ಕಿರಣ್ ನಿರ್ದೇಶನ ಮಾಡುತ್ತಿದ್ದು, ಉದಯ್ ಕೆ ಮೆಹ್ತಾ ನಿರ್ಮಿಸುತ್ತಿದ್ದಾರೆ.
ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರು ಸಾಹಸಮಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದಿತಿ ಹಳ್ಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣ, ಗಣೇಶ್‌ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಧರ್ಮವಿಶ್‌ ಸಂಗೀತ ಸಂಯೋಜನೆಯಿದೆ. ಡಾ. ವಿ ನಾಗೇಂದ್ರ ಪ್ರಸಾದ್‌, ಕವಿರಾಜ್‌ ಹಾಗೂ ಚೇತನ್‌ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ.
SCROLL FOR NEXT