ಬೆಂಗಳೂರು: ಆಸ್ಪತ್ರೆಯಲ್ಲಿ ನೆರವಿನ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ನಟಿ ವಿಜಯಲಕ್ಷ್ಮಿ ಆರೋಪದಿಂದಾಗಿ ತಮಗೆ ಆಘಾತವಾಗಿದೆ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ.
ನಟಿ ವಿಜಯಲಕ್ಷ್ಮಿ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟ ರವಿ ಪ್ರಕಾಶ್, ನಟಿ ವಿಜಯಲಕ್ಷ್ಮಿ ಆರೋಪದಿಂದಾಗಿ ತಮಗೆ ಆಘಾತವಾಗಿದೆ. ಮಾಧ್ಯಮಗಳಲ್ಲಿ ಸಹಾಯ ಮಾಡಿ ಅಂತಾ ಕೇಳುತ್ತಿದ್ದ ವಿಡಿಯೋ ನೋಡಿ, ಒಂದು ಲಕ್ಷ ಹಣ ಸಹಾಯ ಮಾಡಿದೆ. ಅವರಿಗೆ ಹಾಕೋಕೆ ಬಟ್ಟೆ ಸಹ ಇರಲಿಲ್ಲ. ಮಾನವೀಯತೆ ಆಧಾರದಲ್ಲಿ ಊಟ, ಬಟ್ಟೆ, ಹಣ್ಣು, ಮಾತ್ರೆ ಎಂದು ಸಹಾಯ ಮಾಡಿದೆ. ಅವರ ಬಳಿ ಮಾತಾಡಿರೋ ಕಾಲ್ ರಿಕಾರ್ಡ್, ಮಸೇಜ್ ಗಳು, ಎಲ್ಲಾ ಇದೆ. ನನಗೆ ಯಾವುದೇ ಕೆಟ್ಟ ಭಾವನೆ ಇಲ್ಲ. ಕಷ್ಟದಲ್ಲಿದ್ದಾರೆ ಎಂದು ಸಹಾಯ ಮಾಡಿದ್ದೆ ತಪ್ಪಾ ಎಂದು ನಟ ರವಿ ಪ್ರಕಾಶ್ ಹೇಳಿದ್ದಾರೆ.
ಇನ್ನು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಗೆ ನಟ ರವಿ ಪ್ರಕಾಶ್ ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.