ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ: ಸ್ಯಾಂಡಲ್ ವುಡ್ ನಟನ ವಿರುದ್ಧ ನಟಿ ವಿಜಯಲಕ್ಷ್ಮಿ ಪೊಲೀಸ್ ದೂರು!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿ ಅವರಿಗೆ ನೆರವು ನೀಡುವ ನೆಪದಲ್ಲಿ ನಟನೋರ್ವ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿ ಅವರಿಗೆ ನೆರವು ನೀಡುವ ನೆಪದಲ್ಲಿ ನಟನೋರ್ವ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಸ್ಯಾಂಡಲ್ವುಡ್ ನಟಿ ವಿಜಯಲಕ್ಷ್ಮೀಗೆ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈಗ ವಿಜಯಲಕ್ಷ್ಮಿ ತಮಗೆ ನಟನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಕನ್ನಡದ ಖ್ಯಾತ ನಟ ರವಿಪ್ರಕಾಶ್ ವಿರುದ್ಧ ನಟಿ ವಿಜಯಲಕ್ಷ್ಮೀ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ರವಿಪ್ರಕಾಶ್ ವಿರುದ್ಧ ದೂರು ನೀಡಿದ್ದಾರೆ.
'ನಾನು ಕಳೆದ ಕೆಲ ದಿನಗಳಿಂದ ಆನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹಣಕಾಸಿನ ನೆರವು ನೀಡಿ ಅಂತ ಸ್ಯಾಂಡಲ್ ವುಡ್ ನ ಸ್ಟಾರ್ ನಟರಿಗೆ ಮನವಿ ಮಾಡಿಕೊಂಡಿದ್ದೆ. ಇದನ್ನು ನೋಡಿದ ನಟ ರವಿಪ್ರಕಾಶ್ ಫೆಬ್ರವರಿ 27ರಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ, ಒಂದು ಲಕ್ಷ ನಗದು ಸೇರಿದಂತೆ ಅವಶ್ಯವಿರುವ ಬಟ್ಟೆ, ಊಟ, ತಿಂಡಿ ಸೇರಿದಂತೆ ಅವಶ್ಯಕ ವಸ್ತುಗಳನ್ನು ನೀಡಿದ್ದರು. ಇದಾದ ನಂತರ ಪ್ರತಿದಿನ ಆಸ್ಪತ್ರೆಯ ಐಸಿಯೂಗೆ ಬರೋದು, ಪದೇ ಪದೇ ಫೋನ್, ಮಸೇಜ್ ಮಾಡೋದು ಸೇರಿದಂತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ನಟಿ ವಿಜಯಲಕ್ಷ್ಮೀ ಆರೋಪಿಸಿದ್ದಾರೆ.
ಸದ್ಯಕ್ಕೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel