ರಾಧಿಕಾ ಕುಮಾರಸ್ವಾಮಿ ಮತ್ತು ಅರ್ಜುನ್ ಸರ್ಜಾ 
ಸಿನಿಮಾ ಸುದ್ದಿ

ತ್ರಿಭಾಷಾ ಚಿತ್ರದಲ್ಲಿ ಅರ್ಜುನ್ ಸರ್ಜಾ ಗೆ ರಾಧಿಕಾ ಕುಮಾರಸ್ವಾಮಿ ಜೋಡಿ!

ರಾಧಿಕಾ ಕುಮಾರಸ್ವಾಮಿ ಅರ್ಜನ್ ಸರ್ಜಾಗೆ ನಾಯಕಿಯಾಗಿ ನಟಿಸುತ್ತಿದ್ದಾರೆ, ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ತಯಾರಾಗಿದೆ.

ರಾಧಿಕಾ ಕುಮಾರಸ್ವಾಮಿ ಅರ್ಜನ್ ಸರ್ಜಾಗೆ ನಾಯಕಿಯಾಗಿ ನಟಿಸುತ್ತಿದ್ದಾರೆ, ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ತಯಾರಾಗಿದೆ.
2017ರಲ್ಲಿ ಸೆಟ್ಟೇರಿದ್ದ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಕಳೆದ ವಾರ ಟೀಸರ್ ರಿಲೀಸ್ ಆಗಿದೆ, ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಂಡ ಬಳಿಕ ಸೆನ್ಸಾರ್ ಮಂಡಳಿಗೆ ಹೋಗಲಿದೆ, ಸಮೀರ್ ಚಿತ್ರಕ್ಕೆ ಕಥೆ ಬರೆದಿದ್ದು, ಸಿನಿಮಾ ನಿರ್ಮಾಣ ಮಾಡಿದ್ದಾರೆ.
ದರ ಜತೆಗೆ ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಸೆಟ್ಟೇರುತ್ತಿರುವ ಕಾಂಟ್ರಾಕ್ಟ್ ಸಿನಿಮಾ ಶೂಟಿಂಗ್‌ನಲ್ಲೂ ಬಿಝಿಯಾಗಿದ್ದಾರೆ. ಕನ್ನಡ, ತೆಲುಗಿನಲ್ಲಿ ಕಾಂಟ್ರಾಕ್ಟ್ ಎಂದು ಹೆಸರಿಟ್ಟಿದ್ದರೆ, ತಮಿಳಿನಲ್ಲಿ 'ಇರುವರ್ ಒಪ್ಪಂದಂ' ಎಂಬ ಶೀರ್ಷಿಕೆ ಇಡಲಾಗಿದೆ. 
ಈ ಚಿತ್ರದ ಫೋಟೋ ಒಂದು ಈಗ ಸಖತ್ ವೈರಲ್ ಆಗುತ್ತಿದೆ. ರಾಧಿಕಾ ಕುಮಾರಸ್ವಾಮಿ ಹಸೆಮಣೆ ಏರಲು ಮದುವೆಗೆ ಸಿದ್ಧವಾಗುತ್ತಿರುವ ಫೋಟೋ ಭಾರಿ ಸದ್ದು ಮಾಡಿದೆ. ಈಗಾಗಲೆ ಕಾಂಟ್ರಾಕ್ಟ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸಿನಿಮಾ ಬಗ್ಗೆ ಕುತೂಹಲ ಕೆರಳಿಸಿದೆ. ಗಂಡ ಹೆಂಡತಿ ನಡುವಿನ ಸಂಬಂಧದ ಕಥಾಹಂದರ ಸಿನಿಮಾ ಒಳಗೊಂಡಿದೆ. 
ಈ ಚಿತ್ರದಲ್ಲಿ ಅರ್ಜುನ್ ಸರ್ಜಾ, ಜೆಡಿ ಚಕ್ರವರ್ತಿ, ಫೈಸಲ್ ಖಾನ್ ಮುಖ್ಯಭೂಮಿಕೆಯಲ್ಲಿದ್ದಾರೆ. ಅರ್ಜುನ್ ಸರ್ಜಾ ಚಿತ್ರದಲ್ಲಿ ಬಿಝಿನೆಸ್ ಮ್ಯಾನ್ ಪಾತ್ರ ಪೋಷಿಸಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರದು ಸಾಫ್ಟ್‌ವೇರ್ ಇಂಜಿನಿಯರ್ ಪಾತ್ರವಾಗಿದ್ದು, ಇದೊಂದು ಬೋಲ್ಡ್ ಪಾತ್ರ ಎನ್ನಾಲಾಗಿದೆ. ಕಥೆ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿರುವವರು ಸಮೀರ್. ಸುಭಾಷ್ ಆನಂದ್ ಸಂಗೀತ ಇರುವ ಈ ಸಿನಿಮಾ ಬಹುಶಃ ಏಪ್ರಿಲ್‌ಗೆ ತೆರೆಕಾಣುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!