ಧನಂಜಯ್ 
ಸಿನಿಮಾ ಸುದ್ದಿ

ಸೂರಿ 'ಪಾಪ್‌ಕಾರ್ನ್ ಮಂಕಿ ಟೈಗರ್‌'ನಲ್ಲಿ ಡಾಲಿಗಿಂತ ರೋಚಕ ಪಾತ್ರದಲ್ಲಿ ಧನಂಜಯ್!

ಟಗರು ಚಿತ್ರದಲ್ಲಿ ಡಾಲಿ ಪಾತ್ರದ ಮೂಲಕ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಿಸಿದ್ದ ಧನಂಜಯ್ ಇದೀಗ ಸೂರಿ ಪಾಪ್‌ಕಾರ್ನ್ ಮಂಕಿ ಟೈಗರ್‌ ಚಿತ್ರದಲ್ಲಿ ಮತ್ತೊಂದು ರೋಚಕ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಟಗರು ಚಿತ್ರದಲ್ಲಿ ಡಾಲಿ ಪಾತ್ರದ ಮೂಲಕ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಿಸಿದ್ದ ಧನಂಜಯ್ ಇದೀಗ ಸೂರಿ ಪಾಪ್‌ಕಾರ್ನ್ ಮಂಕಿ ಟೈಗರ್‌ ಚಿತ್ರದಲ್ಲಿ ಮತ್ತೊಂದು ರೋಚಕ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಚಿತ್ರದ ಶೂಟಿಂಗ್ ಶೇಕಡ 40ರಷ್ಟು ಮುಕ್ತಾಯಗೊಂಡಿದೆ. ಇನ್ನು ಚಿತ್ರತಂಡ ಧನಂಜಯ್ ಅವರ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ. ಫಸ್ಟ್ ಲುಕ್ ನಲ್ಲಿ ಧನಂಜಯ್ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ತಲೆಯ ಮೇಲೆ ಮಂಕಿ ಎಂದು ಬರೆದುಕೊಂಡು ಕ್ರೂರವಾಗಿ ಕಾಣಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆಸಿದೆ. ಈ ಚಿತ್ರೀಕರಣ ವೇಳೆ ಧನಂಜಯ್ ಈ ರೀತಿ ಕಾಣಿಸಿಕೊಂಡಿದ್ದರು. ಚಿತ್ರವನ್ನು ಸುಧೀರ್ ನಿರ್ಮಿಸಿದ್ದಾರೆ. ಮುಂಬೈನಲ್ಲಿ ಮುಂದಿನ ಹಂತದ ಚಿತ್ರೀಕರಣ ನಡೆಯಲಿದೆ. 
ಚಿತ್ರದಲ್ಲಿ ಧನಂಜಯ್ ಗೆ ಜೋಡಿಯಾಗಿ ನಿವೇಧಿತ ಅಭಿನಯಿಸಿದ್ದಾರೆ. ಜೊತೆಗೆ ಅಮೃತ ಅಯ್ಯಂಗರ್, ಸಪ್ತಮಣಿ, ಮೋನಿಶಾ ನಡ್ಗೀರ್ ಮತ್ತು ಗೌತಮ್ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?