ಇಂದು ರಣಂ ಚಿತ್ರದ ಟೀಸರ್ ಮತ್ತು ಆಡಿಯೋ ರಿಲೀಸ್
ಗ್ಯಾಸ್ ಸಿಲಿಂಡರ್ ಸ್ಫೋಟ ದುರಂತದಿಂದಾಗಿ ರಣಂ ಸಿನಿಮಾ ಚಿತ್ರ ತಂಡದ ಶೂಟಿಂಗ್ ವೇಳಾಪಟ್ಟಿಯಲ್ಲಿ ವ್ಯತ್ಯಯವಾಗಿದೆ, ಈ ನಡುವೆ ರಣಂ ಚಿತ್ರದ ಟೀಸರ್ ಮತ್ತು ಆಡಿಯೋ ...
ಗ್ಯಾಸ್ ಸಿಲಿಂಡರ್ ಸ್ಫೋಟ ದುರಂತದಿಂದಾಗಿ ರಣಂ ಸಿನಿಮಾ ಚಿತ್ರ ತಂಡದ ಶೂಟಿಂಗ್ ವೇಳಾಪಟ್ಟಿಯಲ್ಲಿ ವ್ಯತ್ಯಯವಾಗಿದೆ, ಈ ನಡುವೆ ರಣಂ ಚಿತ್ರದ ಟೀಸರ್ ಮತ್ತು ಆಡಿಯೋ ಬಿಡುಗಡೆಗೆ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ.
ವಿ. ಸಮುದ್ರ ನಿರ್ದೇಶನದ ರಣಂ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗುತ್ತಿದೆ, ಸಿನಿಮಾದಲ್ಲಿ ಚೇತನ್ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ನಟಿಸಿದ್ದಾರೆ. ಚಿರಂಜೀವಿ ಎನ್ ಕೌಂಟರ್ ಸ್ಪೆಷಲಿಸ್ಟ್ ಆಗಿ ನಟಿಸಿದ್ದಾರೆ. ನೀತುಗೌಡ ಪ್ರಧಾನ ಪಾತ್ರದಲ್ಲಿ ಅಭಿನಯಿಸಿದ್ದಾರೆ,
ತಮಿಳು ನಟಿ ವರಲಕ್ಷ್ಮಿ ಶರತ್ ಕುಮಾರ್ ಮತ್ತು ದೇವ್ ಗಿಲ್ ಪ್ರಮುಖ ಪಾತ್ರದಲ್ಲಿದ್ದಾರೆ, ಗುರುಕಿರಣ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಮೊದಲು ಕನ್ನಡ ಆಡಿಯೋ ಬಿಡುಗಡೆಯಾಗಲಿದ್ದು, ನಂತರ ತೆಲುಗು ವರ್ಸನ್ ಆಡಿಯೋ ರಿಲೀಸ್ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಜೂನ್ ತಿಂಗಳಿನಲ್ಲಿ ಸಿನಿಮಾ ರಿಲೀಸ್ ಆಗಲಿದೆ..
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.