ಶ್ವೇತಾ ಪ್ರಸಾದ್ ಮತ್ತು ಕಾವ್ಯಾಗೌಡ 
ಸಿನಿಮಾ ಸುದ್ದಿ

ರಾಧಾ ರಮಣ ಧಾರಾವಾಹಿಯಿಂದ ಹೊರಬಂದ ಶ್ವೇತಾ ಪ್ರಸಾದ್: 'ರಾಧಾ' ಮಿಸ್ ಪಾತ್ರಧಾರಿ ಯಾರು ಗೊತ್ತೆ?

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಯಿಂದ ನಟಿ ಶ್ವೇತಾ ಪ್ರಸಾದ್ ಹೊರಬಂದಿದ್ದಾರೆ, ಅವರ ಬದಲಿಗೆ ಮತ್ತೊಬ್ಬ ...

ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಯಿಂದ ನಟಿ ಶ್ವೇತಾ ಪ್ರಸಾದ್ ಹೊರಬಂದಿದ್ದಾರೆ, ಅವರ ಬದಲಿಗೆ ಮತ್ತೊಬ್ಬ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.
ಕೆಲವು ವೈಯಕ್ತಿಕ ಕಾರಣಗಳಿಂದ ರಾಧಾ ರಮಣ ಸೀರಿಯಲ್ ಮುಖ್ಯ ನಟಿ ಶ್ವೇತಾ ಆರ್ ಪ್ರಸಾದ್ ಅವರು ಈ ಧಾರಾವಾಹಿಯಿಂದ ಹೊರಕ್ಕೆ ಹೋಗಿದ್ದಾರೆ. ಈ ಸಂಗತಿಯನ್ನು ಶ್ವೇತಾ ಅವರು ಕ್ಲಿಯರ್ ಹೇಳಿಯೇ ಹೋಗಿದ್ದು, ಅವರ ಬದಲಿಗೆ ನಟಿ ಕಾವ್ಯಾ ಗೌಡ ಆ ಪಾತ್ರವನ್ನು ಮುಂದಕ್ಕೆ ನಿಭಾಯಿಸಲು ಆಯ್ಕೆಯಾಗಿದ್ದಾರೆ. 
ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ಧಾರಾವಾಹಿಯಲ್ಲಿ ನಟಿಸಿದ್ದರು.
ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್