ಚಿರಂಜೀವಿ 
ಸಿನಿಮಾ ಸುದ್ದಿ

ಚಿರಂಜೀವಿ ಫಾರ್ಮ್ ಹೌಸ್ ನಲ್ಲಿ ಬೆಂಕಿ, ಸೈ ರಾ ನರಸಿಂಹ ರೆಡ್ಡಿ ಚಿತ್ರದ ಸೆಟ್ ಹಾನಿ

ನಗರದ ಹೊರವಲಯದಲ್ಲಿರುವ ಮೆಗಾಸ್ಟಾರ್ ಚಿರಂಜೀವಿ ಅವರ ಫಾರ್ಮ್ ಹೌಸ್ ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಸೈ ರಾ ನರಸಿಂಹ ರೆಡ್ಡಿ ಚಿತ್ರದ ಸೆಟ್ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದ್ರಾಬಾದ್ :  ನಗರದ ಹೊರವಲಯದಲ್ಲಿರುವ ಮೆಗಾಸ್ಟಾರ್  ಚಿರಂಜೀವಿ ಅವರ ಫಾರ್ಮ್ ಹೌಸ್ ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಸೈ ರಾ ನರಸಿಂಹ ರೆಡ್ಡಿ ಚಿತ್ರದ ಸೆಟ್ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಡಿಪೇಟೆಯ ಬಳಿಯ ಕೆರೆಯ ಬಳಿ ಈ ಅವಘಡ ಸಂಭವಿಸಿದೆ. ಫಾರ್ಮ್ ಹೌಸ್ ನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ  ಸೈ ರಾ ನರಸಿಂಹ ರೆಡ್ಡಿ ಚಿತ್ರದ ಸೆಟ್ ನಲ್ಲಿ ಯಾರೂ ಇರಲಿಲ್ಲ ಬೆಂಕಿಯಿಂದಾಗಿ ಸೆಟ್ ನ ಒಂದು ಭಾಗ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈ ರಾ ನರಸಿಂಹ ರೆಡ್ಡಿ  ಉಯ್ಯಾಲಾವಾಡ ನರಸಿಂಹ ರೆಡ್ಡಿ ಜೀವನಾಧಾರಿತ ಐತಿಹಾಸಿಕ ಚಿತ್ರವಾಗಿದ್ದು, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಮಾಡಲಾಗುತ್ತಿದೆ. ಮೆಗಾಸ್ಟಾರ್ ಚಿರಂಜೀವಿ, ಬಿಗ್ ಬಿ ಅಮಿತಾಬ್ ಬಚ್ಚನ್ , ನಯನಾ ತಾರಾ, ತಮನ್ನಾ ಮತ್ತಿತರ ತಾರಾಗಣವಿದೆ.

ಸುರೇಂದ್ರ ರೆಡ್ಡಿ ನಿರ್ದೇಶಿಸುತ್ತಿರುವ ಈ ಸಿನಿಮಾವನ್ನು ಚಿರಂಜೀವಿ ಪುತ್ರ ಹಾಗೂ ಖ್ಯಾತ ನಟ ರಾಮ್ ಚರಣ್  ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?

ಕೋಲಾರ: ಚೆನ್ನೈ - ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!

ಪತ್ನಿಯ ಕುಟುಂಬದವರಿಗೆ ಅವಹೇಳನಕಾರಿ ಸಂದೇಶ ಕಳುಹಿಸುವುದು ಮಾನಸಿಕ ಕ್ರೌರ್ಯ; ವಿಚ್ಛೇದನಕ್ಕೆ ಛತ್ತೀಸ್‌ಗಢ ಹೈಕೋರ್ಟ್ ಅನುಮತಿ