ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಮೇ 24ಕ್ಕೆ 'ಡಾಟರ್ ಆಫ್ ಪಾರ್ವತಮ್ಮ' ಚಿತ್ರ ರಾಜ್ಯಾದ್ಯಂತ ಅದ್ಧೂರಿ ಬಿಡುಗಡೆ

ನಟಿ ಹರಿಪ್ರಿಯಾ, ಸುಮಲತಾ ಅಂಬರೀಷ್ ಪ್ರಧಾನ ಭೂಮಿಕೆಯಲ್ಲಿರುವ ‘ಡಾಟರ್ ಆಫ್ ಪಾರ್ವತಮ್ಮ’ ಇದೇ 24ರಂದು ತೆರೆ ಕಾಣುತ್ತಿದೆ. ಟೀಸರ್ ನಿಂದಲೇ ಸಾಕಷ್ಟು...

ಬೆಂಗಳೂರು: ನಟಿ ಹರಿಪ್ರಿಯಾ, ಸುಮಲತಾ ಅಂಬರೀಷ್ ಪ್ರಧಾನ ಭೂಮಿಕೆಯಲ್ಲಿರುವ ‘ಡಾಟರ್ ಆಫ್ ಪಾರ್ವತಮ್ಮ’ ಇದೇ 24ರಂದು ತೆರೆ ಕಾಣುತ್ತಿದೆ. ಟೀಸರ್ ನಿಂದಲೇ ಸಾಕಷ್ಟು ಸುದ್ದಿ ಹಾಗೂ ಸದ್ದು ಮಾಡುತ್ತಿರುವ ಚಿತ್ರದ ಟ್ರೇಲರ್ ಮತ್ತು ಧ್ವನಿಸಾಂದ್ರಿಕೆ ಇಂದು ಬಿಡುಗಡೆಯಾಗಿದೆ.
ಧ್ವನಿ ಸಾಂದ್ರಿಕೆ ಬಿಡುಗಡೆ ಕಾರ್ಯಕ್ರಮಕ್ಕೆ 'ಡಾಲಿ' ಧನಂಜಯ್ ಮುಖ್ಯಅತಿಥಿಯಾಗಿ ಆಗಮಿಸಿದ್ದರು. ಡಾಟರ್ ಆಫ್ ಪಾರ್ವತಮ್ಮ ಚಿತ್ರದ 'ಜೀವಕ್ಕಿಲ್ಲಿ. . .'ಹಾಡನ್ನು ಧನಂಜಯ್ ಅವರೇ ರಚಿಸಿರುವುದು ವಿಶೇಷ. ತಾಯಿ-ಮಗಳ ಬಾಂಧವ್ಯದ ಜೊತೆಗೆ ಕ್ರೈಂ ಸುತ್ತ ನಡೆಯುವ ಥ್ರಿಲ್ಲರ್ ಎಳೆಯನ್ನು ಹೊಂದಿರುವ ಚಿತ್ರದಲ್ಲಿ ವೈದೇಹಿ ಹೆಸರಿನ ತನಿಖಾಧಿಕಾರಿಯಾಗಿ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. ಸುಮಲತಾ ಅಂಬರೀಶ್ ಅವರು ಹರಿಪ್ರಿಯಾ ತಾಯಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದು ಹರಿಪ್ರಿಯಾರ 25ನೇ ಸಿನಿಮಾ ಎಂಬುದು ಮತ್ತೊಂದು ವಿಶೇಷವಾಗಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.
ದಿಶಾ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣವಾಗಿರುವ ಚಿತ್ರಕ್ಕೆ ಶಂಕರ್ ನಿರ್ದೇಶನವಿದ್ದು, ಕೆ ಎಂ ಶಶಿಧರ್, ಎಂ ವಿಜಯಲಕ್ಷ್ಮೀ ಹಾಗು ಕೃಷ್ಣೇಗೌಡ ಅವರು ಬಂಡವಾಳ ಹೂಡಿದ್ದಾರೆ. ಅರುಳ್ ಕೆ. ಸೋಮಸುಂದರನ್ ಕ್ಯಾಮೆರಾ ಕೈಚಳಕ ಹಾಗೂ ಮಿಥುನ್ ಮುಕುಂದನ್ ಸಂಗೀತವಿದೆ. ಸುರೇಶ್ ಆರ್ಮುಗಂ ಸಂಕಲನ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಮತ್ತು ಪುಟ್ಟರಾಜು ಅವರ ವಸ್ತ್ರವಿನ್ಯಾಸವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel