ಯಶ್ 
ಸಿನಿಮಾ ಸುದ್ದಿ

ಕೆಜಿಎಫ್ ಚಾಪ್ಟರ್ 2 ಸೆಟ್ ಸೇರಲು ನಾನು ಕಾತುರದಿಂದ ಕಾಯುತ್ತಿದ್ದೇನೆ: ಯಶ್

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಧೂಳೆಬ್ಬಿಸಿತ್ತು. ಇದೀಗ ಕೆಜಿಎಫ್ ಚಾಪ್ಟರ್ 2 ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಕೆಜಿಎಫ್‌ ...

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ  ಭಾರತೀಯ ಚಿತ್ರರಂಗದಲ್ಲೇ ಧೂಳೆಬ್ಬಿಸಿತ್ತು. ಇದೀಗ ಕೆಜಿಎಫ್ ಚಾಪ್ಟರ್ 2 ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಕೆಜಿಎಫ್‌ 2 ಚಿತ್ರದ ಚಿತ್ರೀಕರಣ ಶುರುವಾಗಿದೆ.
ಮೇ 13 ರಿಂದ ಶೂಟಿಂಗ್ ಆರಂಭವಾಗಿದ್ದು, ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಯುತ್ತಿದೆ. ಸೆಟ್ ಗೆ ಸೇರಲು ನಟ ಯಶ್ ಕಾತುರದಿಂದ ಕಾಯುತ್ತಿದ್ದಾರೆ.
ಕೆಜಿಎಫ್ ನಲ್ಲಿ ರಾಕಿ ಬಾಯ್ ಪಾತ್ರದಲ್ಲಿ ನಟಿಸಿದ್ದ ಯಶ್ ಗೆ ಹೆಸರು ಹಣ ತಂದುಕೊಟ್ಟಿತ್ತು. ಎಲ್ಲೆಡೆ ಕೆಜಿಎಫ್ ಬಗ್ಗೆ ಮಾತು ಕೇಳಿ ಬಂದಿತ್ತು, ಕೆಜಿಎಫ್2 ಸಿನಿಮಾ ಉತ್ತಮವಾಗಿದ್ದು, ಮತ್ತಷ್ಟು ದೊಡ್ಡದಾಗಿರುತ್ತದೆ.  ದೈತ್ಯ ರಾಕ್ಷಸನನ್ನು ತೆರೆದಿಡಲು ನಾನು ಕಾಯುತ್ತಿದ್ದೇನೆ,
ದೈತ್ಯ ರಾಕ್ಷಸನನ್ನು ಹೊರ ತರಲು ನಾನು ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ, ಈಗಾಗಲೇ ಶೂಟಿಂಗ್ ಆರಂಭವಾಗಿದ್ದು, ಈ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳ ಆರಂಭದಲ್ಲಿ ಸೆಟ್ ಗೆ ಜಾಯಿನ್ ಆಗಲಿದ್ದಾರೆ, ನಾನು ನಟನೆಯನ್ನು ಪ್ರೀತಿಸುತ್ತೇನೆ, ಈ ನಡುವೆ ಸ್ವಲ್ಪ ಗ್ಯಾಪ್ ಆಗಿದೆ, ನಾನು ಮತ್ತೆ ರಾಕಿ ಬಾಯ್ ಪಾತ್ರದಲ್ಲಿ ನಟಿಸಲು ತಯಾರಾಗುತ್ತಿದ್ದೆನೆ ಎಂದು ಯಶ್ ತಿಳಿಸಿದ್ದಾರೆ. 
ರಾಕಿ ಬಾಯ್ ಪಾತ್ರಕ್ಕಾಗಿ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವ ಅವಶ್ಯಕತೆಯಿಲ್ಲ, ಎಲ್ಲ ರೀತಿಯ ಸಿದ್ಧತೆಗಳು ನಡೆದಿವೆ, ನಾವು ಕಾಸ್ಟ್ಯೂಮ್ಸ್ ಮತ್ತಿತರ ವಿಷಯಗಳ ಸಂಬಂಧ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ವಿಜಯ್ ಕಿರಂಗದೂರು ನಿರ್ಮಾಣದ ಈ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

5 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ